ಸಿದ್ದಾಪುರ, ಮಾ. 13: ಅಂಬೇಡ್ಕರ್ ಯುವಕ ಸಂಘದ ವತಿಯಿಂದ 2ನೇ ಆವೃತ್ತಿಯ ಪ್ರೋ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.

ಪಂದ್ಯಾವಳಿಗೆ ಸಿದ್ದಾಪುರದ ಚರ್ಚ್ ಮೈದಾನದಲ್ಲಿ ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಮಣಿ ಹಾಗೂ ತಾ.ಪ.ಂ ಮಾಜಿ ಸದಸ್ಯ ಪಿ.ವಿ. ಜಾನ್ಸನ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಕ್ರೀಡಾ ಪಟುಗಳಲ್ಲಿರುವ ಪ್ರತಿಭೆಯನ್ನು ಹೊರತರಲು ಇಂತಹ ಪಂದ್ಯಾವಳಿಗಳು ಸಹಕಾರಿಯಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪಂದ್ಯಾವಳಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಿದ್ದು, ಜಿಲ್ಲೆಯ ವಿವಿಧೆಡೆಗಳಿಂದ ಕಬಡ್ಡಿ ಪಟುಗಳನ್ನು ಇತ್ತೀಚಿಗೆ ಬಿಡ್ಡಿಂಗ್ ಮೂಲಕ ಆಯ್ಕೆಗೊಳಿಸಲಾಗಿತ್ತು.