ಮಡಿಕೇರಿ, ಮಾ. 13: ಕೊಡಗು ಜಿಲ್ಲಾ ಹಿಂದೂ ಮಲೆಯಾಳಿ ಸಂಘ ಹಾಗೂ ಅಮ್ಮತ್ತಿಯ ಜೈ ಶ್ರೀರಾಮ್ ಮಲೆಯಾಳಿ ಸಂಘದ ಸಂಯುಕ್ತ ಆಶ್ರಯದಲ್ಲಿ 7ನೇ ವರ್ಷದ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿ ಏ. 6, 7 ಮತ್ತು 8 ರಂದು ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಲೆಯಾಳಿ ಸಂಘದ ಗೌರವ ಸಲಹೆಗಾರ ವಿ.ಕೆ. ಲೋಕೇಶ್ ಮಲೆಯಾಳಿ ಸಮುದಾಯವನ್ನು ಒಗ್ಗೂಡಿಸುವ ಮತ್ತು ದೇಶಭಕ್ತಿಯನ್ನು ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಕ್ರೀಡಾಕೂಟವನ್ನು ನಡೆಸಲಾಗುತ್ತಿದೆ ಎಂದರು. ಅಮ್ಮತ್ತಿಯ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ವಿಜೇತ ತಂಡಕ್ಕೆ ರೂ. 25,000 ನಗದು ಬಹುಮಾನ ಹಾಗೂ ದ್ವೀತಿಯ ರೂ. 15,000 ನೀಡಲಾಗುತ್ತಿದೆ.

ಜಿಲ್ಲೆಯ ಹಿಂದು ಮಲಯಾಳಿ ಸಮುದಾಯದ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡು ಕ್ರಿಕೆಟ್ ಹಬ್ಬವನ್ನು ಯಶಸ್ವಿಗೊಳಿಸುವಂತೆ ವಿ.ಕೆ. ಲೋಕೇಶ್ ಮನವಿ ಮಾಡಿದ್ದಾರೆ. ತಂಡದ ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ 9686831055, 9880415660 ನ್ನು ಸಂಪರ್ಕಿಸಬಹುದಾಗಿದೆ.

ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಕೆ.ಬಿ. ಹರ್ಷವರ್ಧನ್, ಉಪಾಧ್ಯಕ್ಷ ಎಂ.ಹೆಚ್. ನಿತೀಶ್, ಸಂಘಟನಾ ಕಾರ್ಯದರ್ಶಿ ಕೆ.ಎಂ. ರತೀಶ್ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಮನೋಜ್ ಕುಮಾರ್ ಉಪಸ್ಥಿತರಿದ್ದರು.