ಮಡಿಕೇರಿ, ಮಾ.21: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕಂಪ್ಯೂಟರ್ ತರಬೇತಿ ಯನ್ನು ತಾ.22 ರಿಂದ (ಇಂದಿನಿಂದ) 28ರವರೆಗೆ ಆಯೋಜಿಸ ಲಾಗಿದೆ. 10ನೇ ತರಗತಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಿ ಸದುಪಯೋಗ ಪಡೆದು ಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ತರಬೇತಿಗೆ ಹಾಜರಾಗುವ ಮುನ್ನ ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳನ್ನು ಹಾಗೂ ಗುರುತಿನ ಚೀಟಿಯನ್ನು ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನಾಥ್ ತಿಳಿಸಿದ್ದಾರೆ.