ಮಡಿಕೇರಿ, ಮಾ. 21: ಸೂರ್ಲಬ್ಬಿ, ಕುಂಬಾರಗಡಿಗೆ, ಕಿಕ್ಕರಳ್ಳಿ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು ಪರೀಕ್ಷೆಯ ಸಂದರ್ಭ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಂಬಂಧಿಸಿದ ಗ್ರಾಮಸ್ಥರು ಚೆಸ್ಕಾಂ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಲ್ಕು ದಿನಗಳಿಂದ ವಿದ್ಯುತ್ ಸಮಸ್ಯೆ ಎದುರಾಗಿರುವ ಬಗ್ಗೆ ದೂರವಾಣಿ ಹಾಗೂ ಖುದ್ದು ಗಮನ ಸೆಳೆದರೂ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ನಿರ್ಲಕ್ಷ್ಯ ತಳೆದಿದ್ದಾರೆ ಎಂದು ಗ್ರಾಮಸ್ಥರು ‘ಶಕ್ತಿ’ಯೊಂದಿಗೆ ಗಮನ ಸೆಳೆದಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಮೇಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕೂಡಲೇ ಗಮನ ಹರಿಸಿ ವಿದ್ಯುತ್ ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.