ಸೋಮವಾರಪೇಟೆ, ಮಾ. 26: ಏಪ್ರಿಲ್ 5 ರಂದು ಬಾಬು ಜಗಜೀವನ್ ರಾಮ್ ಹಾಗೂ ಏಪ್ರಿಲ್ 14 ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರುಗಳ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಮಾರಂಭದ ಬಗ್ಗೆ ಚರ್ಚಿಸ ಲಾಯಿತು. ಸ್ತ್ರೀಶಕ್ತಿ ಭವನದಲ್ಲಿ ಕಾರ್ಯಕ್ರಮ ನಡೆಸುವಂತೆ ತೀರ್ಮಾನಿಸಲಾಯಿತು. ಸರ್ಕಾರ ನೀಡುವ ರೂ. 5 ಸಾವಿರ ಹಣದಲ್ಲಿ ಕಾರ್ಯಕ್ರಮ ನಡೆಸಲು ಸಾಧ್ಯವಿಲ್ಲ. ಹೆಚ್ಚುವರಿ ಹಣವನ್ನು ನೀಡಲು ಸರ್ಕಾರಕ್ಕೆ ಪತ್ರ ಬರೆಯುವಂತೆ ಸಭೆ ತೀರ್ಮಾನಿಸಿತು. ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವಂತೆ ನಿರ್ಧರಿಸಲಾಯಿತು. ಸಭೆಯಲ್ಲಿ ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್, ತಾ.ಪಂ. ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಧರ್ಮಪ್ಪ, ಶಿರಸ್ತೇದಾರ್ ಶಶಿಧರ್, ಜಿ.ಪಂ. ಮಾಜಿ ಅಧ್ಯಕ್ಷೆ ಹೆಚ್.ಬಿ. ಜಯಮ್ಮ, ಪ್ರಮುಖರಾದ ಜೆ.ಆರ್. ಪಾಲಾಕ್ಷ, ಡಿ.ಎಸ್. ನಿರ್ವಾಣಪ್ಪ, ಬಿ.ಇ. ಜಯೇಂದ್ರ, ಮೆಣಸ ರಾಜಪ್ಪ, ಜಯಪ್ಪ ಹಾನಗಲ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.