ಕೂಡಿಗೆ, ಮಾ. 26: ಭಾರತೀಯ ಜನತಾ ಪಕ್ಷದ ಸಂಘಟನೆ ಬಲಿಷ್ಠಗೊಳಿಸುವ ಉದ್ದೇಶದಿಂದ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಶಕ್ತಿ ಸಮಾವೇಶವು ಕೂಡಿಗೆಯ ಶ್ರೀ ರಾಮೇಶ್ವರ ಸಹಕಾರ ಸಂಘದ ಸಭಾಂಗಣದಲ್ಲಿ ತಾ. 27 ರಂದು (ಇಂದು) ಸಮಾವೇಶ ನಡೆಯಲಿದೆ.
ಆರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರು ಮತ್ತು ಎರಡು ಜಿಲ್ಲಾ ಪಂಚಾಯ್ತಿಗಳ ವ್ಯಾಪ್ತಿಯ ಸಮಾವೇಶ ಇದಾಗಿದ್ದು, ಮಾಜಿ ಸಂಸದೆ ತೇಜಸ್ವಿನಿ ರಮೇಶ್, ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಹಾಗೂ ರಾಜ್ಯದ ಹಾಗೂ ಜಿಲ್ಲೆಯ ಪಕ್ಷದ ಮುಖಂಡರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವರು.
ಸಮಾವೇಶ ಅಂಗವಾಗಿ ಕೊಡಗಿನ ಗಡಿಭಾಗ ಶಿರಂಗಾಲದಿಂದ ಕೂಡಿಗೆವರೆಗೆ ಬೈಕ್ ರ್ಯಾಲಿ ನಡೆಯಲಿದೆ ಎಂದು ತಾಲೂಕು ಯುವ ಮೋರ್ಚಾದ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ ತಿಳಿಸಿದ್ದಾರೆ.