ನಾಪೆÇೀಕ್ಲು, ಮಾ. 26: ಕೊಡವರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಅದರ ನಡುವೆ ಒಗ್ಗಟ್ಟು ಕ್ಷೀಣಿಸುತ್ತಿದೆ. ಜನಾಂಗದವರು ಒಗ್ಗಟ್ಟಿನಿಂದ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುನಿಲ್ ಸುಬ್ರಮಣಿ ಸಲಹೆ ನೀಡಿದರು.
ನಾಪೆÇೀಕ್ಲು ಕೊಡವ ಸಮಾಜದ ಹೊರಾಂಗಣಕ್ಕೆ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಚಾವಣಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಜನಾಂಗದ ನಡುವಿನ ಸಣ್ಣ ಪುಟ್ಟ ಬಿನ್ನಾಭಿಪ್ರಾಯಗಳನ್ನು ವೈಭವೀಕರಿಸದೆ ತಮ್ಮೊಳಗೆ ಅದನ್ನು ಪರಿಹರಿಸುವ ಕಾರ್ಯ ಮಾಡಬೇಕು. ಅದಕ್ಕೆ ಕೊಡವ ಸಮಾಜಗಳು ಮುಂದೆ ಬರಬೇಕು ಎಂದರು. ಒಗ್ಗಟ್ಟಿನಿಂದ ಸೂಕ್ತ ವ್ಯಕ್ತಿಯನ್ನು ಸಮಾಜದ ಅಧ್ಯಕ್ಷರನ್ನಾಗಿ ಆಯ್ಕೆಗೊಳಿಸಿ ಎಲ್ಲರೂ ಅವರಿಗೆ ಸಹಕಾರ ನೀಡಬೇಕು ಎಂದರು.
ಆಸ್ತಿ ಮಾರಾಟ ಮಾಡದಂತೆ ಮನವಿ ಮಾಡಿದ ಅವರು ಒಮ್ಮೆ ಆಸ್ತಿ ಮಾರಾಟವಾದರೆ ನಂತರ ನಮಗೆ ಸಿಗುವದಿಲ್ಲ. ಕೊಡವ ಸಮಾಜದವರು ಕೊಡವ ಪದ್ಧತಿ, ಸಂಸ್ಕøತಿಯನ್ನು ಮುಂದುವರಿಸಿಕೊಂಡು ಹೋಗುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ರಾಜಕೀಯ ಹುದ್ದೆಗಳು ಕೇವಲ 5-6 ವರ್ಷಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ ಐಎಎಸ್, ಐಪಿಎಸ್ ಹುದ್ದೆಗಳನ್ನು ಹಲವಾರು ವರ್ಷ ನಿರ್ವಹಿಸ ಬಹುದು. ಆದುದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಹುದ್ದೆಗೇರಿಸಲು ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸ ನೀಡುವಂತಾಗ ಬೇಕು ಎಂದು ಕಿವಿಮಾತು ಹೇಳಿದರು.
ಕೊಡವ ಸಮಾಜದ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಅಧ್ಯಕ್ಷತೆ ವಹಿಸಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಸಂಸತ್ ಸದಸ್ಯ ಪ್ರತಾಪ್ ಸಿಂಹ ಅವರ ಹತ್ತು ಲಕ್ಷ ರೂ. ಮತ್ತು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರ 5 ಲಕ್ಷ ರೂ. ಅನುದಾನದೊಂದಿಗೆ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ಚಾವಣಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಮಾಜಿ ಅಧ್ಯಕ್ಷ ಮಣವಟ್ಟಿರ ಮಾಚಯ್ಯ, ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಮಾತನಾಡಿದರು. ವೇದಿಕೆಯಲ್ಲಿ ಕೊಡವ ಸಮಾಜದ ಉಪಾಧ್ಯಕ್ಷ ಮಾಳೆಯಂಡ ಅಯ್ಯಪ್ಪ, ಖಜಾಂಚಿ ಅಪ್ಪಾರಂಡ ಸುಧೀರ್ ಅಯ್ಯಪ್ಪ, ಇದ್ದರು.
ಚೋಕಿರ ಸಜಿತ್ ಪ್ರಾರ್ಥನೆ, ಕೊಡವ ಸಮಾಜದ ವ್ಯವಸ್ಥಾಪಕ ಶಿವಚಾಳಿಯಂಡ ಜಗದೀಶ್ ನಿರೂಪಿಸಿ, ಕಾರ್ಯದರ್ಶಿ ಮಂಡೀರ ರಾಜಪ್ಪ ವಂದಿಸಿದರು. ಈ ಸಂದರ್ಭದಲ್ಲಿ ಕೊಡವ ಸಮಾಜದ ಆಡಳಿತ ಮಂಡಳಿ ಮಾಜಿ ಕಾರ್ಯದರ್ಶಿ ಬಾದುಮಂಡ ಮುತ್ತಪ್ಪ ಸೇರಿದಂತೆ ನಿರ್ದೇಶಕರು, ಪದಾಧಿಕಾರಿ ಗಳು, ಸದಸ್ಯರು ಹಾಜರಿದ್ದರು.