ಸೋಮವಾರಪೇಟೆ, ಮಾ. 27: ಕರ್ನಾಟಕ ರಾಜ್ಯ ವಿಧಾನ ಸಭೆಗೆ ಚುನಾವಣಾ ದಿನಾಂಕ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ಸೋಮವಾರಪೇಟೆ ಪಟ್ಟಣದ ವಿವಿಧೆಡೆ ಅಳವಡಿಸಿದ್ದ ರಾಜ್ಯ ಸರ್ಕಾರದ ಸಾಧನೆಗಳು, ಯೋಜನೆಗಳನ್ನು ಬಿಂಬಿಸುವ ಪ್ರಚಾರ ಫಲಕಗಳನ್ನು ತೆರವುಗೊಳಿಸಲಾಯಿತು. ಇಲ್ಲಿನ ತಾಲೂಕು ಪಂಚಾಯಿತಿ, ಕೃಷಿ ಇಲಾಖೆ, ಶಾಸಕರ ಕಚೇರಿ, ತಾಲೂಕು ಕಚೇರಿ ಸೇರಿದಂತೆ ಇತರ ಪ್ರದೇಶಗಳಲ್ಲಿ ಅಳವಡಿಸಲಾಗಿದ್ದ ಪ್ರಚಾರ ಫಲಕಗಳನ್ನು ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ತೆರವುಗೊಳಿಸಿದರು.