ಸೋಮವಾರಪೇಟೆ,ಮಾ.27: ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದಾರೆ.

ಸಮೀಪದ ತಾಕೇರಿ ಗ್ರಾಮದ ಸುಬ್ಬಯ್ಯ (57) ಎಂಬವರೇ ಸಾವನ್ನಪ್ಪಿದವರಾಗಿದ್ದು, ಕಳೆದ ತಾ. 15ರಂದು ಪತಿ-ಪತ್ನಿ ಮನೆಯಲ್ಲಿಯೇ ವಿಷ ಸೇವಿಸಿದ್ದರು. ಪತ್ನಿ ಎರಡು ದಿನಗಳ ನಂತರ ಸಾವನ್ನಪ್ಪಿದ್ದರೆ, ಪತಿ ಸುಬ್ಬಯ್ಯ ಅವರಿಗೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಬ್ಬಯ್ಯ ಅವರೂ ಸಹ ಸಾವನ್ನಪ್ಪಿದ್ದು, ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ನೆರವೇರಿಸಲಾಯಿತು.