ಸೋಮವಾರಪೇಟೆ, ಏ. 1: ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ಹೆಸರಾಗಿರುವ, ಸಿದ್ದಗಂಗಾ ಶ್ರೀಗಳು ಭಾರತ ರತ್ನ ಪ್ರಶಸ್ತಿಗೆ ಅರ್ಹರಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರಗಳು ಚಿಂತನೆ ನಡೆಸಬೇಕು ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ಅಭಿಪ್ರಾಯಿಸಿದರು. ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ (ಮೊದಲ ಪುಟದಿಂದ) ನೀಡಿದರೆ, ಪ್ರಶಸ್ತಿಯ ಗೌರವವೂ ಹೆಚ್ಚುತ್ತದೆ. ಸಿದ್ದಗಂಗಾ ಮಠದ ಮೂಲಕ ಲಕ್ಷಾಂತರ ಭಕ್ತರಿಗೆ ಅನ್ನದಾಸೋಹ ಸೇರಿದಂತೆ ವಿದ್ಯಾರ್ಥಿಗಳಿಗೆ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸಿರುವ ಶ್ರೀಗಳ ಕಾರ್ಯಕ್ಕೆ ಅವರೇ ಸಾಟಿ ಎಂದು ಮಹೇಶ್ ಶ್ಲಾಘಿಸಿದರು.

ಸಿದ್ದಗಂಗೆಯ ಶ್ರೀ ಶಿವಕುಮಾರ ಸ್ವಾಮೀಜಿಗಳ 111ನೇ ಹುಟ್ಟು ಹಬ್ಬದ ಅಂಗವಾಗಿ ಇಲ್ಲಿನ ಗಣಪತಿ ದೇವಾಲಯಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ನಂತರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು.

ನಂತರ ಇಲ್ಲಿನ ಜೇಸೀ ವೇದಿಕೆಯಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಾರ್ವಜನಿಕರಿಗೆ ಮಜ್ಜಿಗೆ ಹಾಗೂ ಕೋಸಂಬರಿ ವಿತರಿಸಿದರು.

ಈ ಸಂದರ್ಭ ಶರಣ ಸಾಹಿತ್ಯ ಪರಿಷತ್‍ನ ಕಾರ್ಯದರ್ಶಿ ಪ್ರೇಮ್‍ಕುಮಾರ್, ಖಜಾಂಚಿ ಸೋಮಪ್ಪ, ಜಿ.ಪಂ. ಸದಸ್ಯ ಬಿ.ಜೆ. ದೀಪಕ್, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಿರ್ವಾಣಿ ಶೆಟ್ಟಿ, ಮಹಿಳಾ ಸಮಾಜ ಅಧ್ಯಕ್ಷೆ ನಳಿನಿಗಣೇಶ್, ಪ.ಪಂ. ಸದಸ್ಯರಾದ ಲೀಲಾ ನಿರ್ವಾಣಿ, ಶೀಲಾ ಡಿಸೋಜ, ಮೋಟಾರ್ ಯೂನಿಯನ್ ಅಧ್ಯಕ್ಷ ಸಿ.ಸಿ. ನಂದ ಅವರುಗಳು ದೇವಾಲಯಲ್ಲಿ ಪೂಜೆ ಸಲ್ಲಿಸಿದರು.

ಕರವೇ ಅಧ್ಯಕ್ಷ ದೀಪಕ್, ಜಾನಪದ ಪರಿಷತ್ ಕಾರ್ಯದರ್ಶಿ ಎಂ.ಎ. ರುಬೀನಾ, ನಗರ ಗೌಡ ಒಕ್ಕೂಟದ ಅಧ್ಯಕ್ಷ ಪ್ರಕಾಶ್, ಇಂದಿರಾಗಾಂಧಿ ಅಭಿಮಾನಿ ಸಂಘದ ಹೆಚ್.ಎ. ನಾಗರಾಜು, ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕ ಮತ್ತು ಪುರೋಹಿತರ ಸಂಘದ ಅಧ್ಯಕ್ಷ ಟಿ.ಬಿ. ಮೋಹನ್‍ಮೂರ್ತಿ ಶಾಸ್ತ್ರಿ, ಸೋಮೇಶ್ವರ ದೇವಾಲಯದ ಅರ್ಚಕ ಯೋಗೇಶ್, ಉದ್ಯಮಿಗಳಾದ ಸದಾನಂದ್, ಶ್ರೀಧರ್, ಸುಂದರ್, ಆಸ್ಪತ್ರೆಯ ವೈದ್ಯರಾದ ದೇವಿಕಾ ಅವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಗೋಣಿಕೊಪ್ಪ ವರದಿ: ಸಿದ್ದಗಂಗಾ ಮಹಾಶಿಲ್ಪಿ ಡಾ. ಶಿವಕುಮಾರ ಸ್ವಾಮೀಜಿ ಅವರ 111 ನೇ ಹುಟ್ಟುಹಬ್ಬವನ್ನು ಶರಣ ಸಾಹಿತ್ಯಾ ಪರಿಷತ್ ಮತ್ತು ಧನುಗಾಲ ಮುರುಡೇಶ್ವರಾ ದೇವಸ್ಥಾನ ಸಮಿತಿ ವತಿಯಿಂದ ಆಚರಿಸಲಾಯಿತು.

ಮುರುಡೇಶ್ವರಾ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮೀಜಿ ಹೆಸರಿನಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಮಧ್ಯಾಹ್ನ ಅನ್ನದಾನ, ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಎಸ್. ಸುರೇಶ್, ಕಾರ್ಯದರ್ಶಿ ಎಸ್.ಎಂ. ಪ್ರಸಾದ್, ಮುರುಡೇಶ್ವರಾ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್. ವೀರಪ್ಪ, ಕಾರ್ಯದರ್ಶಿ ವಿರೂಪಾಕ್ಷ ಸೇರಿದಂತೆ ಸದಸ್ಯರು ಪಾಲ್ಗೊಂಡಿದ್ದರು.