ಸೋಮವಾರಪೇಟೆ,ಏ.5: ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಆಗಿ ಭಟ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೀರೇಂದ್ರ ಬಾಡಕರ್ ಅವರು ನೇಮಕಗೊಂಡಿದ್ದು, ತಾಲೂಕು ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ತಹಶೀಲ್ದಾರ್ ಆಗಿದ್ದ ಮಹೇಶ್ ಅವರು ವರ್ಗಾವಣೆಗೊಂಡ ಹಿನ್ನೆಲೆ ತೆರವಾಗಿದ್ದ ಹುದ್ದೆಗೆ ವೀರೇಂದ್ರ ಬಾಡಕರ್ ಅವರನ್ನು ಸರ್ಕಾರ ನೇಮಕಗೊಳಿಸಿದೆ.