ಕೂಡಿಗೆ, ಏ. 6 : ಕೂಡುಮಂಗಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸುಂದರನಗರದ ಬಸ್ ನಿಲ್ದಾಣದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕೂರುವ ಸ್ಥಳದಲ್ಲಿ ಕಸದ ರಾಶಿ ಹಾಗೂ ಮದ್ಯದ ಬಾಟಲಿಗಳನ್ನು ಹಾಕಿದ್ದು, ಪ್ರಯಾಣಿಕರಿಗೆ ಈ ವಾತಾವರಣ ಸಹಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಗ್ರಾಮ ಪಂಚಾಯ್ತಿ ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.