ಆಲೂರುಸಿದ್ದಾಪುರ, ಏ. 6: ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜ, ಮತ್ತು ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ತಾ. 11 ರಂದು ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ. ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್ ಮತ್ತು ಕಾರ್ಯದರ್ಶಿ ಕುಯ್ಯುಮುಡಿ ಜಯಕುಮಾರ್ ಮಾಹಿತಿ ನೀಡಿದ್ದು, ಜೊತೆಯಲ್ಲಿ ರಕ್ತಗುಂಪು ಪರೀಕ್ಷೆಯನ್ನು ಸಹ ನಡೆಸಲಾಗುತ್ತದೆ, ಸಕ್ಕರೆ ಕಾಯಿಲೆ ಬಗ್ಗೆ ರಕ್ತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.ನಂ. 9483834640 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.