ಮಡಿಕೇರಿ, ಏ. 7: ಹತ್ತನೇ ತರಗತಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಏಪ್ರಿಲ್ 18 ರವರೆಗೆ ಕಂಪ್ಯೂಟರ್ ತರಬೇತಿಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ತರಬೇತಿಗೆ ಹಾಜರಾಗುವ ಮೊದಲು ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿ ಹಾಗೂ ಗುರುತಿನ ಚೀಟಿಯನ್ನು ಸಲ್ಲಿಸಲು ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಅಧಿಕಾರಿ ಸಿ.ಜಗನ್ನಾಥ ತಿಳಿಸಿದ್ದಾರೆ.