ಸೋಮವಾರಪೇಟೆ, ಏ .7 : ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಲ್ಲಿನ ಕಸಾಪ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಸ್ಥಳದಲ್ಲೇ ಕವನ ಬರೆಯುವ ಸ್ಪರ್ಧೆ ಆಯೋಜಿಸಲಾಗಿತ್ತು.ಸ್ಪರ್ಧೆಯನ್ನು ಉದ್ಘಾಟಿಸಿದ ನಿವೃತ್ತ ಶಿಕ್ಷಕ ಡಿ.ಕೆ. ಬೊಮ್ಮಯ್ಯ ಮಾತನಾಡಿ, ಕೇವಲ ಓದಿನಿಂದ ಕವನ ಹುಟ್ಟುವದಿಲ್ಲ. ಬದುಕಿನ ಅನುಭವ ವಿಚಾರಧಾರೆಗಳನ್ನು ಕವನದ ಮೂಲಕ ಅಭಿವ್ಯಕ್ತಗೊಳಿಸುವವನು ನಿಜವಾದ ಕವಿ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ.ವಿಜೇತ ಮಾತನಾಡಿ, ಸಾಹಿತ್ಯ ಪರಿಷತ್ ಪ್ರತಿ ತಿಂಗಳು ಕನ್ನಡಪರ ಚಟುವಟಿಕೆಗಳನ್ನು ನಡೆಸುವ ಮೂಲಕ ಕನ್ನಡದ ಬೆಳವಣಿಗೆಗೆ ಶ್ರಮಿಸುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಗ್ರಾಮಾಂತರ ಪ್ರದೇಶಗಳಲ್ಲಿ ಕನ್ನಡದ ಕಾರ್ಯಕ್ರಮಗಳನ್ನು ನಡೆಸಲಾಗುವದು ಎಂದರು. ವೇದಿಕೆಯಲ್ಲಿ ಜಾನಪದ ಪರಿಷತ್‍ನ ತಾಲೂಕು ಪ್ರಧಾನ ಕಾರ್ಯದರ್ಶಿ ವಿಜಯ್ ಹಾನಗಲ್, ಕಸಾಪ ಗೌರವ ಕಾರ್ಯದರ್ಶಿಗಳಾದ ಕೆ.ಎ. ಆದಂ, ಎಲ್.ಎಂ.ಪ್ರೇಮ, ಸಾಹಿತಿ ನ.ಲ.ವಿಜಯ್ ಮತ್ತಿತರರು ಉಪಸ್ಥಿತರಿದ್ದರು.