ಮಡಿಕೇರಿ, ಏ. 12: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. 30 ಕೊನೆಯ ದಿನಾಂಕವಾಗಿದೆ. ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು, ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವದು.
ವಿದ್ಯಾರ್ಥಿಗಳು ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕರಣಗೊಂಡ ಅಂಕಪಟ್ಟಿಯನ್ನು ಸಲ್ಲಿಸಬೇಕು, ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ. 2 ಲಕ್ಷದೊಳಗೆ ಇರಬೇಕು (ಈ ಬಗ್ಗೆ ತಹಶೀಲ್ದಾರ್‍ರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು). ಅರ್ಜಿಯನ್ನು ಪಡೆಯಲು ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ-08272-225531, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 08272-223552, ಸೋಮವಾರಪೇಟೆ 08276-281115 ಮತ್ತು ಪೊನ್ನಂಪೇಟೆ 08274-249476 ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.