ಮಡಿಕೇರಿ, ಏ. 12: ಅನೇಕ ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುವವರ ಬೇಡಿಕೆ ಈಡೇರಿಸುವವರನ್ನು ಪ್ರಸಕ್ತ ಚುನಾವಣೆಯಲ್ಲಿ ಬೆಂಬಲಿಸುವದಾಗಿ, ಅತಿಥಿ ಉಪನ್ಯಾಸಕರ ಸಂಘ ಘೋಷಿಸಿದೆ.
ಪ್ರಣಾಳಿಕೆಯಲ್ಲಿ ಈ ಅಂಶವನ್ನು ಒಳಗೊಂಡಿರುವ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವ ರಾಜಕೀಯ ಪಕ್ಷಕ್ಕೆ ಪ್ರಸಕ್ತ ಚುನಾವಣೆಯಲ್ಲಿ ಬೆಂಬಲ ನೀಡುವದಾಗಿ ಕರ್ನಾಟಕದಾದ್ಯಂತ ಎಲ್ಲಾ ಸ.ಪ್ರ.ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರು ತೀರ್ಮಾನಿಸಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಂ.ಎ. ಶ್ಯಾಂಪ್ರಸಾದ್ ಹಾಗೂ ಸಂಘಟನಾ ಕಾರ್ಯದರ್ಶಿ ಅನಿಲ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತಮ್ಮನ್ನು ಉದ್ಯೋಗದಲ್ಲಿ ಖಾಯಂಗೊಳಿಸುವದು ಸೇರಿದಂತೆ ಇತರ ಪ್ರಮುಖ ಬೇಡಿಕೆಗಳನ್ನು ಸಂಬಂಧಪಟ್ಟವರಿಗೆ ಗಮನ ಸೆಳೆಯಲಾಗಿದೆ.