ಸಿದ್ದಾಪುರ, ಏ. 13: ರಾಜ್ಯದಲ್ಲಿ ಆಡಳಿತ ನಡೆಸಿದ ಹೆಚ್.ಡಿ ಕುಮಾರ ಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಉತ್ತಮ ಯೋಜನೆಗಳು ಜೆ.ಡಿ.ಎಸ್. ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದು ವೀರಾಜಪೇಟೆ ಕ್ಷೇತ್ರದ ಜೆ.ಡಿ.ಎಸ್. ಅಭ್ಯರ್ಥಿ ಸಂಕೇತ್ ಪೂವಯ್ಯ ಹೇಳಿದರು.

ಚೆನ್ನಯ್ಯನಕೋಟೆ ಗ್ರಾ.ಪಂ. ವ್ಯಾಪ್ತಿಯ ಚೆನ್ನಂಗಿ, ಗುಡ್ಲೂರು ಮೂಡಬೈಲು ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಮತ ಯಾಚನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕುಮಾರಸ್ವಾಮಿ 20 ತಿಂಗಳು ಮುಖ್ಯಮಂತ್ರಿಯಾಗಿದ್ದ ಸಂದರ್ಭ ರೈತರಿಗೆ ಹಾಗೂ ಬಡವರಿಗೆ ಅನುಕೂಲವಾಗುವ ರೀತಿಯಲ್ಲಿ ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಮತದಾರರು ಈ ಬಾರಿ ಜೆ.ಡಿ.ಎಸ್. ಪಕ್ಷದ ಪರ ಒಲವು ವ್ಯಕ್ತಪಡಿಸುತ್ತಿದ್ದಾರೆ ಎಂದರು. ಈ ಬಾರಿ ಜಿಲ್ಲೆಯ ಎರಡೂ ಕ್ಷೇತ್ರದಲ್ಲಿ ಜೆ.ಡಿ.ಎಸ್. ಗೆಲುವು ಸಾದಿಸಲಿದೆ ಎಂದರು. ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಜೆ.ಡಿ.ಎಸ್. ನಿರಂತರವಾಗಿ ಹೋರಾಟ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮತದಾರರು ಜೆ.ಡಿ.ಎಸ್. ಪರ ಒಲವು ಹೊಂದಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ಚೆನ್ನಯ್ಯನಕೋಟೆ ಗ್ರಾ.ಪಂ. ವ್ಯಾಪ್ತಿಯ ಜೆ.ಡಿ.ಎಸ್. ಮುಖಂಡರುಗಳಾದ ದೇವರಾಜ್, ಮುಕ್ಕಾಟಿ ವಸಂತ್, ಜಿ.ಬಿ ಸೋಮಯ್ಯ, ರಾಮಕೃಷ್ಣ, ಸುರೇಶ್, ಗಣಪತಿ, ಪ್ರತು, ಕಿರಣ್, ಸುಗಂದ, ರಘುನಂದ, ಬಿ.ಎಂ ನಾಣಯ್ಯ ಸೇರಿದಂತೆ ಇನ್ನಿತರರು ಇದ್ದರು.