ಮೂರ್ನಾಡು, ಏ. 14: ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ 5ನೇ ವರ್ಷದ ವಾರ್ಷಿಕ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ನೀಡಲಾಯಿತು. ಕೊಡಗು ಜಿಲ್ಲಾ ಅಂಬಾಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘ, ತಾಳತ್ತಮನೆ ಹಾಗೂ ಯುವ ಸಬಲೀಕರಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮೂರ್ನಾಡು ವಿದ್ಯಾಸಂಸ್ಥೆ ಬಾಚ್ಚೆಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾದ ಕ್ರೀಡಾಕೂಟವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಟಿ. ನಾರಾಯಣ ಉದ್ಘಾಟಿಸಿದರು. ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಸೋಮವಾರಪೇಟೆ ಸಂಘಟನಾ ಕಾರ್ಯದರ್ಶಿ ಎಂ.ಟಿ. ಗುರುವಪ್ಪ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಂಘದ ಹಿರಿಯ ಸಲಹೆಗಾರ ಎಂ.ಕೆ. ಬಾಬು, ಮಾಜಿ ಅಧ್ಯಕ್ಷ ಎಂ.ಟಿ. ಚನಿಯಪ್ಪ, ಎಂ.ಎಸ್. ಮಂಜುನಾಥ್, ಕೊಡಗು ಜಿಲ್ಲಾ ಅಂಭಾಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಅಧ್ಯಕ್ಷ ಎಂ.ಎಸ್. ದಿವ್ಯಕುಮಾರ್, ಉಪಾಧ್ಯಕ್ಷ ರತ್ನ ಮಂಜರಿ ನರಸಿಂಹ ಆಗಮಿಸಿದರು.

ಅಧ್ಯಕ್ಷ ಪರಮೇಶ್ವರ್ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ದೇವಕಿ ಜಿ.ಆರ್. ನಾಯ್ಕ, ಕಾರ್ಯದರ್ಶಿ ಎಂ.ಇ. ಪವನ್, ಕೋಶಾಧಿಕಾರಿ ಎಂ.ಎಸ್. ಕಾಂತಿ ಇತರರು ಉಪಸ್ಥಿತರಿದ್ದರು. ಎರಡು ದಿನಗಳ ಕಾಲ ಆಯೋಜಿಸಲಾದ ಕ್ರೀಡಾಕೂಟದಲ್ಲಿ ಕ್ರಿಕೆಟ್, ವಾಲಿಬಾಲ್, ಥ್ರೋಬಾಲ್, ಹಗ್ಗಜಗ್ಗಾಟ, ಭಾರದ ಕಲ್ಲು ಎಸೆತ, ನಿಂಬೆ ಚಮಚ ಓಟ, ಗೋಣಿಚೀಲ ಓಟ, ಸಂಗೀತ ಕುರ್ಚಿ, ಕಪ್ಪೆ ಜಿಗಿತ, ಸೂಜಿಗೆ ನೂಲು ಹಾಕುವ ಓಟದ ಸ್ಪರ್ಧೆಗಳು ನಡೆಯಲಿದೆ.