ಕೂಡಿಗೆ: ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಸಮಿತಿಯ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಸಂಘದ ಕಛೇರಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಬಿ.ಡಿ.ಅಣ್ಣಯ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾದ ಕೊಡಗು ಜಿಲ್ಲಾ ಐಎನ್‍ಟಿಯೂಸಿ ಅಧ್ಯಕ್ಷ ಟಿ.ಪಿ. ಹಮೀದ್ ಅಂಬೇಡ್ಕರ್ ಅವರ ಕುರಿತು ಮಾತನಾಡಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಗಣೇಶ್, ಸದಸ್ಯರು ಹಾಗೂ ಮಹಿಳಾ ಘಟಕದ ಪದಾಧಿಕಾರಿ, ಗ್ರಾಮಸ್ಥರು ಇದ್ದರು.
ವಾಲ್ನೂರು-ತ್ಯಾಗತ್ತೂರು ಕೂಡಿಗೆ: ವಾಲ್ನೂರು-ತ್ಯಾಗತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಶಾಲಾ ಮುಖ್ಯ ಶಿಕ್ಷಕ ಹೆಚ್.ಕೆ. ಕುಮಾರ್ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ಜಗದ ಬೆಳಕು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿರುವಂತೆ ನೀರಿಗೆ ಕರಗುವ ಮಣ್ಣಾಗದೆ ನೀರಿನ ದಿಕ್ಕನ್ನು ಬದಲಿಸುವ ಹೆಬ್ಬಂಡೆಗಳಂತೆ ನಿಲ್ಲುವಂತಹ ಶಕ್ತಿಯನ್ನು ಮಕ್ಕಳು ಹೊಂದಬೇಕು. ಹಾಗೂ ಭಾರತ ದೇಶದ ಪ್ರಥಮ ಕಾನೂನು ಮಂತ್ರಿ ವಿಶ್ವಜ್ಞಾನ ಬೆಳಕಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಗುಣಗಳನ್ನೂ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಬಿ.ಕೆ.ಲಕ್ಷ್ಮಿ ವಹಿಸಿದ್ದರು. ಈ ಸಂದರ್ಭ ಶಿಕ್ಷಕರಾದ ಸುರೇಶ್, ಚೇತನ್‍ಕುಮಾರ್, ಆಶಾಮಣಿ, ಸರೋಜ, ಜಯಲಕ್ಷ್ಮಿ, ಗಂಗಮ್ಮ, ಶೋಭಾ ಹಾಗೂ ವಿದ್ಯಾರ್ಥಿಗಳು ಇದ್ದರು. ಕುಶಾಲನಗರ: ಕುಶಾಲನಗರ ಪಟ್ಟಣ ಪಂಚಾಯ್ತಿ ಕಛೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ನಡೆಯಿತು. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಷನೆ ಸಲ್ಲಿಸಿದರು. ನಂತರ ಮಾತನಾಡಿದ ಅವರು ಸಂವಿಧಾನದ ಆಶಯ, ಮೂಲಭೂತ ಹಕ್ಕುಗಳ ಬಗ್ಗೆ ನೆರೆದಿದ್ದವರಿಗೆ ಮಾಹಿತಿ ನೀಡಿದರು.
ಈ ಸಂದರ್ಭ ಪಂಚಾಯಿತಿ ದಫೇದಾರ್ ಕುಮಾರ್, ಪೌರಕಾರ್ಮಿಕರು ಇತರ ನೌಕರರು ಇದ್ದರು.ಸೋಮವಾರಪೇಟೆ: ಇಲ್ಲಿಗೆ ಸಮೀಪದ ಐಗೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸಲಾಯಿತು.
ಪ್ರಭಾರ ಪ್ರಾಂಶುಪಾಲರಾದ ಹೆಚ್.ಕೆ. ಉಮೇಶ್ ಮಾತನಾಡಿ, ಮಹಾನ್ ಮಾನವತಾವಾದಿ ಡಾ|| ಬಿ.ಆರ್. ಅಂಬೇಡ್ಕರ್ ಅವರನ್ನು ಇಡೀ ದೇಶವೇ ಆರಾಧಿಸುತ್ತಿದೆ. ಸಮಾಜದ ಸಮಾನತೆಗಾಗಿ ಹೋರಾಡಿದ ಅಂಬೇಡ್ಕರ್ ಅವರು ಪ್ರತಿಪಾದಿಸಿದ ವಿಚಾರಗಳನ್ನು ಮೈಗೂಢಿಸಿಕೊಳ್ಳಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರೌಢÀಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕ ಎಂ.ಎಂ.ಯಶವಂತ್ ಕುಮಾರ್, ಸಹ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.