ವೀರಾಜಪೇಟೆ, ಏ. 15: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವು ಅಧಿಕಾರಕ್ಕೆ ಬರುವದು ಖಚಿತವೆಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆ.ಡಿ.ಎಸ್. ಅಭ್ಯರ್ಥಿ ಸಂಕೇತ್ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೊಂಡಂಗೇರಿಯ ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಮತದಾರರು ಈ ಬಾರಿ ಪ್ರಾದೇಶಿಕ ಪಕ್ಷದ ಪರ ಒಲವು ವ್ಯಕ್ತಪಡಿಸಿದ್ದು ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಆಯ್ಕೆಯಾಗುವದು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು. ಈಗಾಗಲೇ ಜಿಲ್ಲೆಯಾದ್ಯಂತ ಪ್ರಚಾರ ಕಾರ್ಯ ಕೈಗೊಳ್ಳಲಾಗಿದ್ದು ಜೆಡಿಎಸ್ ಪಕ್ಷದ ಪರ ಉತ್ತಮ ಪ್ರತಿಕ್ರಿಯೆ ಲಭಿಸಿದೆಯೆಂದು ತಿಳಿಸಿದ್ದಾರೆ.
ಸಭೆಯಲ್ಲಿ ವೀರಾಜಪೇಟೆ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಎಸ್.ಹೆಚ್. ಮತೀನ್, ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿ.ಎ. ನಾಸೀರ್, ಪಕ್ಷದ ಪದಾಧಿಕಾರಿಗಳಾದ ಕುಂಞÂ ಮಹಮ್ಮದ್, ಮಾಹಿನ್, ಇಬ್ರಾಹಿಂ, ಲತೀಫ್, ಅಬ್ದುಲ್ ರೆಹಮಾನ್, ತಾಹೀರ್, ಅಜೀಜ್, ಕುಂಞÂ ಅಹಮ್ಮದ್ ಇನ್ನಿತರರು ಹಾಜರಾಗಿದ್ದರು.