ಅಮರಾನಾಥ ಗುಹೆ : ಎನ್ಜಿಟಿ ಆದೇಶ ವಜಾ
ನವದೆಹಲಿ ಏ. 16: ಪ್ರಸಿದ್ಧ ಪುಣ್ಯಕ್ಷೇತ್ರ ದಕ್ಷಿಣ ಕಾಶ್ಮೀರದಲ್ಲಿನ ಅಮರಾನಾಥ ಗುಹೆ ದೇವಾಲಯದಲ್ಲಿ ನೈಸರ್ಗಿಕವಾಗಿ ರೂಪುಗೊಂಡಿರುವ ಪವಿತ್ರ ಮಹಾ ಶಿವಲಿಂಗ ಎದುರು ನಿಶಬ್ದ ಕಾಪಾಡಬೇಕು ಎಂದು ಎನ್ಜಿಟಿ ನೀಡಿದ್ದ ವಿವಾದಾತ್ಮಕ ಆದೇಶವನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಈ ಸಂಬಂಧ ಕಳೆದ ವರ್ಷ ಡಿಸೆಂಬರ್ 14 ರಂದು ಎನ್ ಜಿಟಿ ಹೊರಡಿಸಿದ್ದ ಆದೇಶವನ್ನು ಅನುಮೋದಿಸಬಾರದು. ಅದು ಅಮರಾನಾಥ ಗುಹಾಂತರ ದೇವಾಲಯಕ್ಕೆ ಅನ್ವಯವಾಗುವುದಿಲ್ಲ ಎಂದು ಉನ್ನತ ನ್ಯಾಯಾಲಯ ಹೇಳಿದೆ. ಅಮರಾನಾಥ ದೇಗುಲದಲ್ಲಿನ ಪರಿಸರ ಮಾಲಿನ್ಯ ಸಂಬಂಧ ಕೈಗೊಳ್ಳಬೇಕಾದ ಅಗತ್ಯ ಪ್ರಕ್ರಿಯೆಗಳ ಬಗ್ಗೆ ಸೂಕ್ತ ಅರ್ಜಿ ಸಲ್ಲಿಸುವಂತೆ ದೂರುದಾರರಾದ ಗೌರಿ ಮುಲೇಖಿ ಅವರಿಗೆ ನ್ಯಾಯಾಧೀಶರಾದ ಎಂ. ಬಿ. ಲೋಕುರ್ ಮತ್ತು ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠ ತಿಳಿಸಿದೆ. ವಿಚಾರಣೆ ವೇಳೆ ಅಮರನಾಥ ದೇವಾಲಯ ಮಂಡಳಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಧಾರ್ಮಿಕ ಶ್ಲೋಕಗಳ ಪಠಣೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದರು.
ಸ್ಫೋಟ ಪ್ರಕರಣ : ನ್ಯಾಯಾಧೀಶರ ರಾಜೀನಾಮೆ
ಹೈದ್ರಾಬಾದ್, ಏ. 16: 2007ರ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದ ಎನ್ ಐಎ ವಿಶೇಷ ಕೋರ್ಟ್ ನ್ಯಾಯಾಧೀಶ ರವೀಂದ್ರ ರೆಡ್ಡಿ ಅವರು ಸೋಮವಾರ ಸಂಜೆ ರಾಜೀನಾಮೆ ನೀಡಿದ್ದಾರೆ. ರವೀಂದ್ರ ರೆಡ್ಡಿ ಅವರು ಇಂದು ಬೆಳಗಷ್ಟೇ ಸ್ವಾಮಿ ಅಸೀಮಾನಂದ ಸೇರಿದಂತೆ ಬಲಪಂಥೀಯ ಸಂಘಟನೆಗಳಿಗೆ ಸೇರಿದ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದರು. ಇದರ ಬೆನ್ನಲ್ಲೇ ಈಗ ರಾಜಿನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಸೂಕ್ತ ಸಾಕ್ಷ್ಯಾಧಾರ ಮತ್ತು ಪೂರಕ ದಾಖಲೆಗಳನ್ನು ಒದಗಿಸಿ ಆರೋಪ ಸಾಬೀತುಪಡಿಸುವಲ್ಲಿ ವಿಫಲವಾಗಿದೆ ನ್ಯಾಯಮೂರ್ತಿ ರವೀಂದ್ರ ರೆಡ್ಡಿ ಅವರು ಹೇಳಿದ್ದರು.
ಸಂತ್ರಸ್ತೆ ಕುಟುಂಬಕ್ಕೆ ರಕ್ಷಣೆ ನೀಡಲು ಸೂಚನೆ
ನವದೆಹಲಿ, ಏ. 16: ಕಠುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬ ಮತ್ತು ವಕೀಲೆಗೆ ಸೂಕ್ತ ರಕ್ಷಣೆ ಒದಗಿಸುವಂತೆ ಸುಪ್ರೀಂಕೋರ್ಟ್ ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಸೋಮವಾರ ಸೂಚಿಸಿದೆ. ತಮ್ಮ ಕುಟುಂಬ ಹಾಗೂ ಕೇಸು ವಾದಿಸುತ್ತಿರುವ ವಕೀಲೆಗೆ ಪೆÇಲೀಸ್ ರಕ್ಷಣೆ ನೀಡಬೇಕು. ಜಮ್ಮುವಿನ ಕಠುವಾದ ಸ್ಥಳೀಯ ನ್ಯಾಯಾಲಯದಲ್ಲಿ ಸರಿಯಾಗಿ ವಿಚಾರಣೆ ನಡೆಯುವುದಿಲ್ಲ, ಹಾಗಾಗಿ ಚಂಡಿಗಢದ ನ್ಯಾಯಾಲಯಕ್ಕೆ ಪ್ರಕರಣ ವರ್ಗಾಯಿಸುವಂತೆ ಸಂತ್ರಸ್ತೆಯ ಅಪ್ಪ ಸುಪ್ರೀಂಕೋಟ್ರ್ಗೆ ಸಲಿಸಿದ್ದ ಮನವಿಯಲ್ಲಿ ಕೋರಿದ್ದರು. ಕೇಸು ವಾದಿಸುತ್ತಿರುವ ತನಗೆ ಜೀವ ಬೆದರಿಕೆ ಇದೆ ಎಂದು ವಕೀಲೆ ದೀಪಿಕಾ ಸಿಂಗ್ ರಜಾವತ್ ಕೂಡ ಹೇಳಿದ್ದಾರೆ. ಜಮ್ಮುವಿನ ಕಠುವಾದಲ್ಲಿ ಎಂಟು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಲಾಗಿದೆ.
ಪ್ರವೀಣ್ ತೊಗಾಡಿಯಾ ಉಪವಾಸ ಸತ್ಯಾಗ್ರಹ
ಗುಜರಾತ್, ಏ. 16: ದೇಶದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲದಿರುವಾಗ ಪ್ರಧಾನಿ ನರೇಂದ್ರಮೋದಿ ವಿದೇಶಿ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮಾಜಿ ನಾಯಕ ಪ್ರವೀಣ್ ತೊಗಾಡಿಯಾ ಆರೋಪಿಸಿದ್ದು, ಏ.17 ರಿಂದ ಉಪವಾಸ ಸತ್ಯಾಗ್ರಹ ಪ್ರಾರಂಭಿಸಲಿದ್ದಾರೆ. ಗಡಿ ಪ್ರದೇಶಗಳಲ್ಲಿ ನಮ್ಮ ಸೈನಿಕರಿಗೆ ಸುರಕ್ಷತೆ ಇಲ್ಲ. ಹೆಣ್ಣು ಮಕ್ಕಳಿಗೆ ಮನೆಯಲ್ಲಿ ರಕ್ಷಣೆ ಇಲ್ಲದಂತಾಗಿದ್ದು, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದಾಗ್ಯೂ, ನಮ್ಮ ಪ್ರಧಾನಿ ವಿದೇಶಿ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ತೊಗಾಡಿಯಾ ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರಮೋದಿ ಸ್ವೀಡನ್ ಮತ್ತು ಇಂಗ್ಲೇಂಡ್ ಗೆ ಇಂದಿನಿಂದ ಐದು ದಿನ ಪ್ರವಾಸ ಕೈಗೊಂಡಿದ್ದಾರೆ. ಹಿಮಾಚಲ ಪ್ರದೇಶದ ಮಾಜಿ ಗೌರ್ನರ್ ವಿ.ಎಸ್. ಕೊಕ್ಜಿ ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡ ನಂತರ ತೊಗಡಿಯಾ ಅವರನ್ನು ವಿಶ್ವ ಹಿಂದೂ ಪರಿಷತ್ತಿನಿಂದ ಗೇಟ್ ಪಾಸ್ ನೀಡಲಾಗಿದೆ.
ದಂಪತಿಗೆ ಟಿಕೆಟ್ ನೀಡಿದ ಬಿಜೆಪಿ
ಬೆಳಗಾವಿ, ಏ. 16: ಕಾಂಗ್ರೆಸ್, ಜೆಡಿಎಸ್ ಕುಟುಂಬ ರಾಜಕೀಯದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ ಸಹ ವಿಧಾನಸಭೆ ಚುನಾವಣೆಯಲ್ಲಿ ಪತಿ, ಪತ್ನಿ ಇಬ್ಬರಿಗೂ ಟಿಕೆಟ್ ನೀಡಿದೆ. ನಿಪ್ಪಾಣಿ ಹಾಲಿ ಶಾಸಕಿ ಹಾಗೂ ಉದ್ಯಮಿ ಅಣ್ಣಾಸಾಹೇಬ ಜೊಲ್ಲೆ ಅವರ ಪತ್ನಿ ಶಶಿಕಲಾ ಜೊಲ್ಲೆ ಅವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಿದ್ದ ಬಿಜೆಪಿ, ಇಂದು ಪ್ರಕಟಗೊಂಡ ಎರಡನೇ ಪಟ್ಟಿಯಲ್ಲಿ ಪತಿ ಅಣ್ಣಾಸಾಹೇಬ ಜೊಲ್ಲೆ ಚಿಕ್ಕೋಡಿ ಸದಲಗಾ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದೆ. 2004ರಲ್ಲಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣಾಸಾಹೇಬ ಜೊಲ್ಲೆ ಅವರು ಕಾಂಗ್ರೆಸ್ ನ ಪ್ರಕಾಶ ಹುಕ್ಕೇರಿ ವಿರುದ್ಧ ಸೋತಿದ್ದರು. ಕ್ಷೇತ್ರ ಪುನರ್ವಿಂಗಡಣೆಯ ನಂತರ 2008ರಲ್ಲಿ ನಿಪ್ಪಾಣಿ ಕ್ಷೇತ್ರದಿಂದ ಪತ್ನಿ ಶಶಿಕಲಾ ಜೊಲ್ಲೆ ಅವರನ್ನು ಕಣಕ್ಕಿಳಿಸಿದ್ದರು. ಕಾಂಗ್ರೆಸ್ನ ಕಾಕಾಸಾಹೇಬ ಪಾಟೀಲ ಅವರ ಎದುರು ಪರಾಭವಗೊಂಡಿದ್ದರು. 2013ರಲ್ಲಿ ಪುನಃ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು.