ಮಡಿಕೇರಿ, ಏ. 16: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ಥಿ ಕಾರ್ಯ ವನ್ನು ನಿರ್ವಹಿಸಬೇಕಾಗುವದರಿಂದ ತಾ. 17 ರಂದು (ಇಂದು) ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ 66/11ಏಗಿ ವೀರಾಜಪೇಟೆ, ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೋಗುವ ಫೀಡರ್ಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಮಗ್ಗುಲ, ಕೊಂಡಂಗೇರಿ, ಚೆಂಬೆಬೆಳ್ಳೂರು, ಹಾಲುಗುಂದ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಪ್ರೈವೇಟ್ ಬಸ್ ನಿಲ್ದಾಣ, ಆರ್ಜಿ, ಕಲ್ಲುಬಾಣೆ, ಬಿಟ್ಟಂಗಾಲ, ಕುಟ್ಟಂದಿ, ಹೆಗ್ಗಳ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಕೋರಿದ್ದಾರೆ.