ಸುಂಟಿಕೊಪ್ಪ, ಏ. 16: ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರ 127 ನೇ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ, ಡಾ|| ಬಿ. ಆರ್. ಅಂಬೇಡ್ಕರ್ ಅವರು ವಿಶ್ವ ಕಂಡ ಶ್ರೇಷ್ಠ ಮಾನವತಾವಾದಿ ಮತ್ತು ಜ್ಞಾನಿ ಎಂದು ಬಣ್ಣಿಸಿದರು.
ಅಂಬೇಡ್ಕರ್ ಅವರ ಆದರ್ಶ ಜೀವನ, ಹೋರಾಟ, ಚಿಂತನೆ ಹಾಗೂ ಸಿದ್ಧಾಂತಗಳನ್ನು ನಾವು ಮೈಗೂಡಿಸಿಕೊಂಡು ಸಂವಿಧಾನದ ಆಶಯಗಳಿಗೆ ಚ್ಯುತಿ ಬಾರದಂತೆ ಬದುಕಬೇಕಿದೆ ಎಂದರು.
ಶಿಕ್ಷಕ ಟಿ. ಜಿ. ಪ್ರೇಮಕುಮಾರ್, ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಶಿಕ್ಷಕಿಯರಾದ ಎಸ್. ಆರ್. ಚಿತ್ರಾ, ಕೆ. ಕೆ. ಪುಷ್ಪ, ಮಂಜುಳಾ ಎಂ.ಕೆರೂರ್ ಇದ್ದರು.