ಮಡಿಕೇರಿ, ಏ. 17: ಕಾಶ್ಮೀರದ ಕಥುವಾದಲ್ಲಿ ಎಂಟು ವರ್ಷದÀ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯನ್ನು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ತೀವ್ರವಾಗಿ ಖಂಡಿಸಿದೆ. ಪತ್ರಿಕಾ ಹೇಳಿಕೆ ನೀಡಿರುವ ಕಾಂಗ್ರೆಸ್ ನಗರಾಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್, ಬಾಲಕಿಯ ಹತ್ಯೆ ಪ್ರಕರಣ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪವಾಗಿದ್ದು, ದೇಶ ತಲೆ ತಗ್ಗಿಸುವಂತಹ ಪರಿಸ್ಥಿತಿ ಬಂದೊದಗಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅಮಾನವೀಯ ಕೃತ್ಯಗಳನ್ನು ತಡೆಯಲು ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಯನ್ನು ವಿಧಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.