ಮಡಿಕೇರಿ, ಏ. 17: ಕಲೆ, ಸಾಂಸ್ಕøತಿಕ, ಯಾವದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜ ಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೋಗ್ಯವಾದ ಯಾವದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗುತ್ತದೆ.
ದೇಶದಲ್ಲಿ ನೆಲಿಸಿರುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 5 ರಿಂದ 18 ವರ್ಷದೊಳಗಿನ (1.8.2000 ಹಾಗೂ ನಂತರ ಜನಿಸಿದ) ಮಕ್ಕಳನ್ನು 2018ನೇ ಸಾಲಿಗೆ ಆಯ್ಕೆ ಮಾಡಲಾಗುವದು. ಈ ರಾಷ್ಟ್ರ ಮಟ್ಟದ ಪ್ರಶಸ್ತಿಯು ಒಂದು ಚಿನ್ನದ ಪದಕ, 20 ಸಾವಿರ ನಗದು, 10 ಸಾವಿರ ಮೌಲ್ಯದ ಪುಸ್ತಕ ವೋಚರ್, ಪ್ರಶಸ್ತಿ ಪತ್ರ ಹಾಗೂ 35 ಬೆಳ್ಳಿ ಪದಕ (ಪ್ರತಿ ರಾಜ್ಯ ಕೇಂದ್ರಾಡಳಿತ ಪ್ರದೇಶಕ್ಕೆ ಒಂದು ಬೆಳ್ಳಿ ಪದಕ) ರೂ. 10 ಸಾವಿರ ನಗದು, ರೂ. 3 ಸಾವಿರ ಮೌಲ್ಯದ ಪುಸ್ತಕ ವೋಚರ್ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಈ ಪ್ರಶಸ್ತಿಗೆ ಆಯ್ಕೆಯಾಗು ವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರಬೇಕು. ಅಸಾಧಾರಣವೆಂದು ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿ ಒದಗಿಸಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
2018ನೇ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇಲ್ಲಿಂದ ಪಡೆದು, ಆಂಗ್ಲ ಭಾಷೆಯಲ್ಲಿ ದ್ವೀ ಪ್ರತಿಯನ್ನು ಭರ್ತಿ ಮಾಡಿದ ಅರ್ಜಿಗಳನ್ನು ಮೇ 30 ರೊಳಗೆ ತಲುಪುವಂತೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಈ ಕಛೇರಿಗೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವದೇ ಕಾರಣಕ್ಕೂ ಪರಿಗಣಿಸಲಾಗುವದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-228010ಗೆ ಸಂಪರ್ಕಿಸಬಹುದು. ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.