ಮಡಿಕೇರಿ, ಏ. 17: ನಗರದ ಲೋಕಾಯುಕ್ತ ಅಧಿಕಾರಿಗಳು ತಾ. 20 ರಂದು ಸೋಮವಾರಪೇಟೆಯ ತಹಶೀಲ್ದಾರರ ಕಚೇರಿ, ತಾ. 21 ರಂದು ವೀರಾಜಪೇಟೆಯ ತಹಶೀಲ್ದಾರರ ಕಚೇರಿ ಹಾಗೂ ತಾ. 23 ರಂದು ನಗರದ ತಹಶೀಲ್ದಾರರ ಕಚೇರಿಯಲ್ಲಿ, ಆಯಾಯ ದಿನಗಳಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯನ್ನು ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವದು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರದಲ್ಲಿ ನೀಡಬಹುದಾಗಿದೆ.

ಸಾರ್ವಜನಿಕರು ಕರ್ತವ್ಯ ಲೋಪವೆಸುಗುವ ಸರ್ಕಾರಿ/ಸಾರ್ವಜನಿಕ ನೌಕರರ ವಿರುದ್ದ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ, ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೋಲೀಸ್ ಠಾಣೆ, ಗೌಳಿಬೀದಿ, ಮಡಿಕೇರಿ, ದೂಸಂ; 08272-220797 ಸಂಪರ್ಕಿಸಬಹುದು.