ಕೂಡಿಗೆ, ಏ. 18: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದಲ್ಲಿರುವ ಕಾಡು ಬಸವೇಶ್ವರ ದೇವರ ಪೂಜೋತ್ಸವವು ಬಸವ ಜಯಂತಿ ಅಂಗವಾಗಿ ಶ್ರದ್ಧಾಭಕ್ತಿಯಿಂದ ನೆರವೇರಿತು.
ಬಸವ ಜಯಂತಿ ಅಂಗವಾಗಿ ಕಾಡು ಬಸವೇಶ್ವರ ದೇವರಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಈ ಸಂದರ್ಭ ಗ್ರಾಮವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಪೂಜಾ ಕಾರ್ಯದಲ್ಲಿ ಸುತ್ತಮುತ್ತಲ ಗ್ರಾಮಗಳಾದ ಭುವನಗಿರಿ, ಮದಲಾಪುರ, ಕೂಡಿಗೆ, ಹೆಗ್ಗಡಹಳ್ಳಿ ವ್ಯಾಪ್ತಿಯ ನೂರಾರು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮಹಾಮಂಗಳಾರತಿಯ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭ ದೇವಾಲಯ ಸಮಿತಿಯ ಅಧ್ಯಕ್ಷ ಕೃಷ್ಣ, ಕಾರ್ಯದರ್ಶಿ ಬಸವರಾಜ್ ಸೇರಿದಂತೆ ಸಮಿತಿಯ ನಿರ್ದೇಶಕರು, ಗ್ರಾಮದ ರೈತ ಒಕ್ಕೂಟದ ಅಧ್ಯಕ್ಷರು, ಸದಸ್ಯರು, ನಬಾರ್ಡ್ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.