ಮಡಿಕೇರಿ, ಏ. 18 : ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ರಾಜ್ಯದ ಚುನಾವಣಾಧಿಕಾರಿಗಳು ಬ್ರಿಟಿಷ್ ಅಧಿಕಾರಿಗಳಂತೆ ವರ್ತಿಸುತ್ತಿದ್ದಾರೆಂದು ಆರೋಪಿಸಿರುವ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ಕುಮಾರ್, ಮೇ 2 ರಿಂದ ಪಿಯುಸಿ ತರಗತಿಗಳನ್ನು ಆರಂಭಿಸುವ ಔಚಿತ್ಯದ ಬಗ್ಗೆ ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹಳ ಹಿಂದಿನಿಂದಲೂ ವೈಜ್ಞಾನಿಕ ಕಾರಣಗಳಿಗಾಗಿ ವಿದ್ಯಾರ್ಥಿಗಳಿಗಾಗಿ ಬೇಸಿಗೆ ಕಾಲದ ಎರಡು ತಿಂಗಳು ರಜೆ ಘೋಷಿಸುತ್ತಿರುವದು ಸಾಮಾನ್ಯ. ಆದರೆ, 2018-19ನೇ ಸಾಲಿಗೆ ಮೇ 2 ರಿಂದಲೆ ತರಗತಿಗಳನ್ನು ಆರಂಭಿಸಲು ಮುಂದಾಗಿರುವ ಅಧಿಕಾರಿಗಳು ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿದ್ದಾರೆಂದು ಆರೋಪಿಸಿದರು.
ಬೇಸಿಗೆ ಕಾಲದಲ್ಲಿ ಅಂತರ್ಜಲ ಮಟ್ಟ ಕುಸಿದು ನೀರಿನ ಕೊರತೆ ಉಂಟಾಗುವದರಿಂದ ಹಾಸ್ಟೆಲ್ಗಳಲ್ಲಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ತೊಂದರೆಯಾಗುತ್ತದೆ, ಅಲ್ಲದೆ, ಉಪನ್ಯಾಸಕರು ಹಾಗೂ ಮಡಿಕೇರಿ, ಏ. 18 : ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ರಾಜ್ಯದ ಚುನಾವಣಾಧಿಕಾರಿಗಳು ಬ್ರಿಟಿಷ್ ಅಧಿಕಾರಿಗಳಂತೆ ವರ್ತಿಸುತ್ತಿದ್ದಾರೆಂದು ಆರೋಪಿಸಿರುವ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ಕುಮಾರ್, ಮೇ 2 ರಿಂದ ಪಿಯುಸಿ ತರಗತಿಗಳನ್ನು ಆರಂಭಿಸುವ ಔಚಿತ್ಯದ ಬಗ್ಗೆ ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹಳ ಹಿಂದಿನಿಂದಲೂ ವೈಜ್ಞಾನಿಕ ಕಾರಣಗಳಿಗಾಗಿ ವಿದ್ಯಾರ್ಥಿಗಳಿಗಾಗಿ ಬೇಸಿಗೆ ಕಾಲದ ಎರಡು ತಿಂಗಳು ರಜೆ ಘೋಷಿಸುತ್ತಿರುವದು ಸಾಮಾನ್ಯ. ಆದರೆ, 2018-19ನೇ ಸಾಲಿಗೆ ಮೇ 2 ರಿಂದಲೆ ತರಗತಿಗಳನ್ನು ಆರಂಭಿಸಲು ಮುಂದಾಗಿರುವ ಅಧಿಕಾರಿಗಳು ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿದ್ದಾರೆಂದು ಆರೋಪಿಸಿದರು.
ಬೇಸಿಗೆ ಕಾಲದಲ್ಲಿ ಅಂತರ್ಜಲ ಮಟ್ಟ ಕುಸಿದು ನೀರಿನ ಕೊರತೆ ಉಂಟಾಗುವದರಿಂದ ಹಾಸ್ಟೆಲ್ಗಳಲ್ಲಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ತೊಂದರೆಯಾಗುತ್ತದೆ, ಅಲ್ಲದೆ, ಉಪನ್ಯಾಸಕರು ಹಾಗೂ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್.ಪಿ. ದಿನೇಶ್ ಮಾತನಾಡಿ, ಈ ಬಾರಿಯ ನೈಋತ್ಯ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್, ಒಂದು ವರ್ಷದ ಮೊದಲೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನೈಋತ್ಯ ಭಾಗದಲ್ಲಿ 62,505 ಮತದಾರರಿದ್ದು, ಹೆಸರನ್ನು ನೋಂದಣಿ ಮಾಡಿಸಲು ಇನ್ನೂ ಕಾಲಾವಕಾಶ ಇದೆ ಎಂದರು.
ವಿಧಾನ ಪರಿಷತ್ ಸಭಾಪತಿ ಡಿ.ಹೆಚ್.ಶಂಕರ ಮೂರ್ತಿ ಅವರ ಹೆಸರನ್ನು ಬಿಜೆಪಿ ಅಭ್ಯರ್ಥಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಕಳೆದ ಬಾರಿಯ ಚುನಾವಣೆಯಲ್ಲಿ ಕೆಲವೇ ಮತಗಳ ಅಂತರದಿಂದ ಸೋಲುಂಡಿದ್ದ ನಾವು ಈ ಬಾರಿ ಗೆಲುವು ಸಾಧಿಸುವದು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಅಪ್ರು ರವೀಂದ್ರ ಹಾಗೂ ಪದವಿ ಪೂರ್ವ ಶಿಕ್ಷಕರ ಸಂಘದÀ ನಿಕಟಪೂರ್ವ ಅಧ್ಯಕ್ಷ ಸಿ.ಎನ್. ವಿಶ್ವನಾಥ್ ಉಪಸ್ಥಿತರಿದ್ದರು.