ಸೋಮವಾರಪೇಟೆ, ಏ.19: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನ ವಶಪಡಿಸಿಕೊಂಡಿರುವ ಪೊಲೀಸರು, ವಾಹನ ಚಾಲಕನನ್ನು ಬಂಧಿಸಿ ಮೊಕದ್ದಮೆ ದಾಖಲಿಸಿ ದ್ದಾರೆ.
ಕಲ್ಕಂದೂರು ಗ್ರಾಮದ ನಾಗೇಶ್ ಎಂಬವರಿಗೆ ಸೇರಿದ ಕ್ಯಾಂಟರ್ನಲ್ಲಿ ಇಂದು ಬೆಳಗ್ಗಿನ ಜಾವ 3.30 ಸಮಯದಲ್ಲಿ ಅಕ್ರಮವಾಗಿ ಮರಳು ಸಾಗಾಟವಾಗುತ್ತಿದ್ದ ಸಂದರ್ಭ ತೋಳೂರುಶೆಟ್ಟಳ್ಳಿ ಗ್ರಾಮದ ಮುಖ್ಯರಸ್ತೆಯ ಬಳಿ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ವಾಹನ ಚಾಲಕ ರಾಜು ಎಂಬಾತನನ್ನು ಬಂಧಿಸಿರುವ ಪೊಲೀಸರು, ಕ್ಯಾಂಟರ್ ಮಾಲೀಕ ನಾಗೇಶ್ ವಿರುದ್ಧವೂ ದೂರು ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಶ್ರೀನಿವಾಸಮೂರ್ತಿ, ವೃತ್ತನಿರೀಕ್ಷಕ ನಂಜುಂಡೇಗೌಡ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.