ನಾಪೆÇೀಕ್ಲು, ಏ. 19: ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ಕತ್ತಲೆಯಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಚಂಗೇಟಿರ, ಮಾದೆಯಂಡ, ಬೊಟ್ಟೋಳಂಡ ಕುಟುಂಬಸ್ಥರ ಮನೆಗಳಿಗೆ ಸಾಗುವ ವಿದ್ಯುತ್ ಸಂಪರ್ಕದಲ್ಲಿ ಸಮಸ್ಯೆಯಾಗಿದೆ. ಈ ಬಗ್ಗೆ ಕಳೆದ ಎರಡು ವರ್ಷಗಳಿಂದ ದೂರು ಸಲ್ಲಿಸಿದ್ದರೂ, ಚೆಸ್ಕಾಂ ಇಲಾಖಾ ಮುಖ್ಯಸ್ಥರು ಈ ಬಗ್ಗೆ ಕಿಂಚಿತ್ತೂ ಮುತುವರ್ಜಿ ವಹಿಸುತ್ತಿಲ್ಲ. ಇದಕ್ಕಾಗಿ ಗ್ರಾಮಸ್ಥರೇ ವಿದ್ಯುತ್ ತಂತಿಗಳಿಗೆ ತಗಲುವ ಮರಗಳ ರೆಂಬೆ ಕೊಂಬೆಗಳನ್ನು ಕಡಿಯುವಂತಹ ಪರಿಸ್ಥಿತಿ ಎದುರಾಗಿರುವದು ವಿಷಾದನೀಯ ಎಂದು ಚಂಗೇಟಿರ ಕುಶಾಲಪ್ಪ ‘ಶಕ್ತಿ’ಗೆ ತಿಳಿಸಿದ್ದಾರೆ.
ಆದುದರಿಂದ ಕೂಡಲೇ ಈ ಬಗ್ಗೆ ಸಂಬಂಧಿಸಿದ ಇಲಾಖಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟಿಸಲಾಗುವದು ಎಂದು ಎಚ್ಚರಿಸಿದ್ದಾರೆ.