ನಾಪೆÉÇೀಕ್ಲು, ಏ. 20: ಕೊಡಗು ಜಿಲ್ಲೆಯಲ್ಲಿ ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಮಡಿಕೇರಿ ಮತ್ತು ವೀರಾಜಪೇಟೆ ಕ್ಷೇತ್ರಗಳಲ್ಲಿ ಜೆ.ಡಿ.ಎಸ್. ಅಭ್ಯರ್ಥಿಗಳು ಜಯಭೇರಿ ಭಾರಿಸಲಿದ್ದಾರೆ ಎಂದು ರಾಜ್ಯ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಆಲಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆ.ಡಿ.ಎಸ್. ಅಧಿಕಾರಕ್ಕೆ ಬಂದರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ರೈತಪರ, ಜನ ಪರ ಆಡಳಿತ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ರೈತರ ಹಿತವನ್ನು ಕಾಪಾಡಲು ಸಾಲ ಮನ್ನಾ ಮಾಡುವ ಘೋಷಣೆಯನ್ನು ಮಾಡಿದ್ದಾರೆ. ಅದು ಅವರು ಅಧಿಕಾರಕ್ಕೆ ಬಂದರೆ ಮಾತ್ರ ಸಾಧ್ಯ. ಆದ್ದರಿಂದ ಪ್ರಜ್ಞಾವಂತ ಜೆ.ಡಿ.ಎಸ್. ಅಭ್ಯರ್ಥಿಗಳನ್ನು ಗೆಲ್ಲಿಸುವದರ ಮೂಲಕ ಸ್ವಸ್ತ ಸಮಾಜ, ನೆಮ್ಮದಿಯ ಬದುಕಿಗೆ ಅವಕಾಶ ಮಾಡಿಕೊಡಬೇಕು ಎಂದು ಕೋರಿದರು. ಮಾಜಿ ಮಂತ್ರಿ ಜೀವಿಜಯ ಅವರ ವ್ಯಕ್ತಿತ್ವ ಈಗಾಗಲೇ ಮಡಿಕೇರಿ ಕ್ಷೇತ್ರದ ಮತದಾರರಿಗೆ ತಿಳಿದಿದೆ.

ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮೇರಿಯಂಡ ಸಂಕೇತ್ ಪೂವಯ್ಯ ಅವರು ಜನರ ಕಷ್ಟ-ಸುಖಗಳಿಗೆ ಸ್ಪಂದಿಸುವ ಮನೋಭಾವವನ್ನು ಹೊಂದಿದ್ದು, ಜಿಲ್ಲೆಯಲ್ಲಿ ನಡೆದ ಕಾಡಾನೆಯಿಂದ ಮಾನವ ಪ್ರಾಣ ಹಾನಿ, ಹುಲಿ ಧಾಳಿ, ದಿಡ್ಡಳ್ಳಿ ಸಮಸ್ಯೆ ಸೇರಿದಂತೆ ಜನಪರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದು, ಅವರಿಗೆ ಅಧಿಕಾರ ನೀಡಿದ್ದಲ್ಲಿ ಕ್ಷೇತ್ರದ ಅಭಿವೃದ್ಧಿ ಇನ್ನೂ ಹೆಚ್ಚು ನಡೆಯಲು ಅವಕಾಶ ನೀಡಿದಂತಾಗುತ್ತದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ವೀರಾಜಪೇಟೆ ಕ್ಷೇತ್ರದ ಜೆ.ಡಿ.ಎಸ್. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಎಂ. ರಷೀದ್, ನಾಪೆÇೀಕ್ಲು ನಗರ ಅಧ್ಯಕ್ಷ ಆಸಿಫ್ ಆಲಿ, ಯುವ ಮುಖಂಡ ಮಜೀದ್, ಕ್ಷೇತ್ರ ಮುಖಂಡ ಮಹಮ್ಮದ್ ಇದ್ದರು.