ವೀರಾಜಪೇಟೆ, ಏ. 23: ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಚೆಪ್ಪುಡಿರ ಎಸ್. ಅರುಣ್ ಮಾಚಯ್ಯ ಅವರು ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಅಖಾಡಕ್ಕೆ ಧುಮುಕಿದರು. ನಾಮಪತ್ರ ಸಲ್ಲಿಸುವ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿದರು.ತಾಲೂಕು ಕೇಂದ್ರದಲ್ಲಿ ಮೆರವಣಿಗೆಯೊಂದಿಗೆ ಇಲ್ಲಿನ ಸೆರಿನಿಟಿ ಹಾಲ್ನಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಬಳಿಕ ತಾಲೂಕು ಚುನಾವಣಾಧಿಕಾರಿ ಕಚೇರಿಗೆ ಕಾಂಗ್ರೆಸ್ ಮುಖಂಡರಾದ ಶಿವು ಮಾದಪ್ಪ, ಕೊಲ್ಲಿರ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ರಮಾನಾಥ್, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಾಂ, ನರೇಂದ್ರ ಕಾಮತ್ ಅವರುಗಳೊಂದಿಗೆ ತೆರಳಿ ಉಮೇದುವಾರಿಕೆ ಸಲ್ಲಿಸಿದ ಅರುಣ್ ಮಾಚಯ್ಯ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.ಆ ಮುನ್ನ ನಡೆದ ಸಭೆಯಲ್ಲಿ ಪಕ್ಷದ (ಮೊದಲ ಪುಟದಿಂದ) ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಉದ್ದೇಶಿಸಿ ಅರುಣ್ ಮಾತನಾಡಿದರು.ಪಕ್ಷದ ಮುಖಂಡರು ನನ್ನ ಮೇಲೆ ವಿಶ್ವಾಸವನ್ನಿಟ್ಟು ಆಯ್ಕೆ ಮಾಡಿದ್ದಾರೆ ಅದನ್ನು ನಾನು ಉಳಿಸಿಕೊಳ್ಳಲು ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ನನ್ನ ಗೆಲುವಿಗೆ ಸಹಕಾರ ನೀಡುವಂತೆ ಮನವಿ ಮಾಡಿ ದರಲ್ಲದೆ. ನನ್ನಿಂದ ಲೋಪದೋಷ ಗಳಿದ್ದಲ್ಲಿ ಚರ್ಚೆನಡೆಸಿ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳುವಂತೆ ತಿಳಿಸಿದರಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ನಮ್ಮ ಗೆಲುವಿಗೆ ಶ್ರೀರಕೆ ್ಷಯಾಗಲಿದೆ ಎಂದರು. ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಬಹುದೊಡ್ಡ ಕ್ಷೇತ್ರವಾಗಿದ್ದು ಕಾರ್ಯಕರ್ತರು ತಮ್ಮ ಬಿನ್ನಾಭಿಪ್ರಾಯವನ್ನು ಮರೆತು ಒಗ್ಗಟ್ಟಿನಿಂದ ಪಕ್ಷದಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಶಿವುಮಾದಪ್ಪ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಪಕ್ಷದ ಅಭ್ಯರ್ಥಿಯನ್ನು ಹೆಚ್ಚು ಮತಗಳಿಂದ ಗೆಲ್ಲಿಸಲು ಮುಂದಾಗಬೇಕು ಎಂದರು. ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ ಈ ಚುನಾವಣೆಯಲ್ಲಿ ಕೊಡಗಿನ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಗೆಲ್ಲಿಸುವದು ಕಾರ್ಯಕರ್ತರ ಕರ್ತವ್ಯವಾಗಿದೆ ಎಂದರು.
ಕಾಂಗ್ರೆಸ್ ಸರಕಾರ ಐದು ವರ್ಷದ ಅವಧಿಯಲ್ಲಿ ರಾಜ್ಯದ ಜನತೆಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸಿರುವದರಿಂದ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮೈಸೂರಿನ ಮಾಜಿ ಸಂಸದ ವಿಜಯ ಶಂಕರ್ ಹೇಳಿದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕ್ಷಣದಲ್ಲಿ ನೀಡಿದ ಭರವಸೆಗಳನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಈಡೇರಿಸಿದ್ದಾರೆ. ಜನತೆಯ ಒಲವು ಈಗ ಕಾಂಗ್ರೆಸ್ ಪಕ್ಷದ ಮೇಲಿದ್ದು ಇದರಿಂದ ಕಾಂಗ್ರೆಸ್ ಮತ್ತೆ ಅದಿಕಾರಕ್ಕೆ ಬರಲಿದೆ. ಎಂದರಲ್ಲದೆ ಕೇಂದ್ರದ ನರೇಂದ್ರ ಮೋದಿ ಮಾತಿನಲ್ಲೇ ಜನರನ್ನು ಮೋಡಿ ಮಾಡಿ ಅಧಿಕಾರಕ್ಕೆ ಬಂದರು ಅವರ ಯಾವುದೇ ಭರವಸೆಗಳು ಜನರಿಗೆ ತಲುಪಿಲ್ಲ ಎಂದು ಟೀಕಿಸಿದರು.
ರಾಜ್ಯ ರೇಷ್ಮೆ ಮಂಡಳಿಯ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ಕಾಂಗ್ರೆಸ್ ಕಾರ್ಯಕರ್ತರು-ಮತದಾರರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸಿ.ಎಸ್.ಅರುಣ್ ಮಾಚಯ್ಯ ಅವರನ್ನು ಅತ್ಯಂತ ಅಧಿಕ ಮತಗಳಿಂದ ಗೆಲ್ಲಿಸಲು ಪಣತೊಡಬೇಕಾಗಿದೆ. ಕಾಂಗ್ರೆಸ್ ಸರಕಾರ ಅನ್ನೊದು ಜನರ ಮನೆಮಾತಾಗಿದೆ. ಎಲ್ಲರು ಸೇರಿ ಮತ್ತೆ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರುವಂತೆ ಪ್ರಯತ್ನಿಸಬೇಕು ಎಂದರು. ಹಿರಿಯ ವಕೀಲರಾದ ಚಂದ್ರಮೌಳಿ ಅವರು ಮಾತನಾಡಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಿಂದ ಕಾರ್ಯ ಪ್ರವರ್ತರಾಗಬೇಕು ಎಂದರು.
ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ, ಪಕ್ಷದ ಮುಖಂಡರಾದ ಜೆ.ಎ.ಕರುಂಬಯ್ಯ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲಾಂ ಇತರರು ಸಭೆಯಲ್ಲಿ ಮಾತನಾಡಿದರು.
ವೇದಿಕೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ರಮಾನಾಥ್, ಸೇವಾದಳದ ಚಿಲ್ಲವಂಡ ಕಾವೇರಪ್ಪ, ಮುಖಂಡರುಗಳಾದ ವಿ.ಕೆ.ಸತೀಶ್, ಪಿ.ಎ.ಹನೀಪ್, ಅಬ್ದುಲ್ ರೆಹಮಾನ್, ಎಂ.ಎಲ್. ಸೈನುದ್ದೀನ್ ಸೇರಿದಂತೆ ತಾಲೂಕು-ಹೋಬಳಿ ಮಟ್ಟದ ಬೂತ್ ಮಟ್ಟದ ಸದಸ್ಯರುಗಳು ಹಾಜರಿದ್ದರು.
ರೋಡ್ ಷೋ
ಮೊದಲು ಬೆಳಿಗ್ಗೆ 11ಗಂಟೆಗೆ ಪಟ್ಟಣದ ಮುಖ್ಯ ಬೀದಿಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅರುಣ್ ಮಾಚಯ್ಯ ಅವರೊಂದಿಗೆ ಪಕ್ಷದ ಜಿಲ್ಲಾ ಮುಖಂಡರುಗಳು ಹಾಗೂ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತ ರುಗಳು ಸೆರಿನಿಟಿ ಸಭಾಂಗಣದವರೆಗೆ ಮೆರವಣಿಗೆ ನಡೆಸಿದರು.
ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ತಡವಾಗಿ ಸಭೆಗೆ ಹಾಜರಾದುದರಿಂದ ಹೆಚ್ಚಿಗೆ ಮಾತನಾಡಲಿಲ್ಲ.