ಗುಂಡಿನ ಕಾಳಗದಲ್ಲಿ ಇಬ್ಬರು ಹುತಾತ್ಮ
ಶ್ರೀನಗರ, ಏ. 24: ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಉಗ್ರರು ಹಾಗೂ ರಕ್ಷಣಾ ಪಡೆಗಳ ನಡುವಿನ ಗುಂಡಿನ ಕಾಳಗದಲ್ಲಿ ಯೋಧ, ಪೆÇಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು, ಒಬ್ಬ ಉಗ್ರ ಹತ್ಯೆಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಪೆÇಲೀಸ್ ಅಧಿಕಾರಿಯೊಬ್ಬರು, ಇಲ್ಲಿನ ಲಾಮ್ ಅರಣ್ಯ ಪ್ರದೇಶದಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿಯಲು ಸಿಆರ್‍ಪಿಎಫ್ ಅರೆಸೇನಾ ಪಡೆ ಹಾಗೂ ಪೆÇಲೀಸ್ ಸಿಬ್ಬಂದಿ ಜಂಟಿಯಾಗಿ ಮಂಗಳವಾರ ಮುಂಜಾನೆ ಕೂಂಬಿಂಗ್ ಮತ್ತು ಹುಡುಕುವ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಉಗ್ರರು ಎಕೆ-47 ರೈಫಲ್‍ಗಳಿಂದ ಧಾಳಿ ಆರಂಭಿಸಿದರು. ಪ್ರತಿಯಾಗಿ ರಕ್ಷಣಾ ಪಡೆಗಳೂ ಧಾಳಿ ನಡೆಸಿದವು. ಧಾಳಿಯಿಂದಾಗಿ ಯೋಧ ಹಾಗೂ ಪೆÇಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಶ್ರೀನಗರದಲ್ಲಿರುವ ಸೇನೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ. ತ್ರಾಲ್ ಪ್ರದೇಶದಲ್ಲಿ ಉಗ್ರರು ಬಲವಾದ ಹಿಡಿತ ಹೊಂದಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಕಮಾಂಡರ್ ಬರ್ಹಾನ್ ವಾನಿ, ಅಲ್ಖೈದಾ ಉಗ್ರ ಝಾಕೀರ್ ಮೂಸಾ ಇಲ್ಲಿಯವರೇ ಆಗಿರುವದರಿಂದ ಉಗ್ರ ಚಟುವಟಿಕೆಗಳೂ ಸಕ್ರಿಯವಾಗಿವೆ.
ಬಸವರಾಜು ವರುಣಾದ ಬಿಜೆಪಿ ಅಭ್ಯರ್ಥಿ
ಮೈಸೂರು, ಏ. 24: ದಿಢೀರ್ ಗೊಂದಲಕ್ಕೀಡಾಗಿದ್ದ ವರುಣಾ ಕ್ಷೇತ್ರದಲ್ಲಿ ಕೊನೆಗೂ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಟಿ. ಬಸವರಾಜು ವರುಣಾ ಕ್ಷೇತ್ರದಿಂದ ನಾಪಪತ್ರ ಸಲ್ಲಿಕೆ ಮಾಡಿದ್ದಾರೆ. ಮಾಧ್ಯಮಗಳು ವರದಿ ಮಾಡಿರುವಂತೆ ನಂಜನಗೂಡು ತಾಲೂಕು ಕಚೇರಿಯಲ್ಲಿ ಟಿ. ಬಸವರಾಜು ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಬಿಜೆಪಿ ಮುಖಂಡ ಶಿವಣ್ಣ ಅವರು ಬಸವರಾಜು ಅವರಿಗೆ ಬಿ ಫಾರಂ ರವಾನೆ ಮಾಡಿದರು. ಬಸವರಾಜು ಅವರು ವರುಣಾ ಕ್ಷೇತ್ರದ ಬಿಜೆಪಿ ಬ್ಲಾಕ್ ಘಟಕದ ಅಧ್ಯಕ್ಷರಾಗಿದ್ದು, ಆರ್‍ಎಸ್‍ಎಸ್ ಮುಖಂಡ ಸಂತೋಷ್ ಅವರ ಆಪ್ತರು ಎನ್ನಲಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಟಿ. ಬಸವರಾಜು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ವರುಣಾ ಕ್ಷೇತ್ರಕ್ಕೆ ಬಂದು ಕೇವಲ 20 ದಿನ ಆಯ್ತು. ನಾನು 37 ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ವರುಣಾದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಿ ಪ್ರಚಾರ ಮಾಡಿಲ್ಲ. ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು ಅಷ್ಟೇ ಎಂದರು.
ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ
ಬಾದಾಮಿ, ಏ. 24: ತೀವ್ರ ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬಾದಾಮಿ ವಿಧಾನಸಭೆ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ಬಾದಾಮಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರಾದ ಸಿ.ಎಂ. ಇಬ್ರಾಹಿಂ, ಎಸ್.ಆರ್. ಪಾಟೀಲ್, ಸಚಿವ ತಿಮ್ಮಾಪುರ, ಹೆಚ್.ಕೆ. ಪಾಟೀಲ್, ಹಾಲಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ, ಈ ಹಿಂದೆ ಟಿಕೆಟ್ ಘೋಷಣೆಯಾಗಿದ್ದ ದೇವರಾಜ್ ಪಾಟೀಲ್ ಸೇರಿದಂತೆ ಹಲವು ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಮಾತನಾಡಿದ ಸಿದ್ದರಾಮ್ಯಯ ಅವರು, ನಮ್ಮ ಕಾರ್ಯಕರ್ತರು ಮತ್ತು ಮುಖಂಡರು ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಾರೆ. ನಾನು ಕೇವಲ ಒಂದು ದಿನ ಮಾತ್ರ ಪ್ರಚಾರ ಮಾಡುತ್ತೇನೆ. ಎರಡೂ ಕ್ಷೇತ್ರದಲ್ಲಿ ತಾನು ಗೆಲುವು ಸಾಧಿಸುತ್ತೇನೆ. ತಾನು ಯಾವದೇ ಸರ್ವೆಯನ್ನು ನಂಬುವದಿಲ್ಲ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಪೂರ್ಣ
ಬೆಂಗಳೂರು, ಏ. 24: ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಮಂಗಳವಾರ ಮುಕ್ತಾಯವಾಯಿತು. ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿ, ತಾ. 17 ರಿಂದ ತಾ. 24 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಿತ್ತು. ಕೊನೆಯ ದಿನವಾದ ಇಂದು ರಾಜ್ಯದ ಗಮನ ಸೆಳೆದಿರುವ ಕ್ಷೇತ್ರ ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಶ್ರೀರಾಮುಲು, ಕಾಂಗ್ರೆಸ್‍ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಎಂ.ಹೆಚ್. ಅಂಬರೀಷ್ ಅವರು ಕಾಂಗ್ರೆಸ್‍ಗೆ ‘ಕೈ’ಕೊಟ್ಟಿದ್ದರಿಂದ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಗಣಿಗ ಪಿ. ರವಿಕುಮಾರ್ ಅವರನ್ನು ಕಣಕ್ಕಿಳಿಸಿದೆ. ಎಲ್ಲರ ಕುತೂಲ ಕೆರಳಿಸಿದ್ದ ವರುಣಾ ಕ್ಷೇತ್ರದಲ್ಲಿ ಸಿಎಂ ಪುತ್ರನ ವಿರುದ್ಧ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ ಎಂದು ಹೇಳುತ್ತಾ ಬಂದಿದ್ದ ಬಿಜೆಪಿ ಸೋಮವಾರ ತನ್ನ ವರಸೆಯನ್ನು ಬದಲಿಸಿತ್ತು. ವಿಜಯೇಂದ್ರ ನಾಮಪತ್ರ ಸಲ್ಲಿಸುವದಿಲ್ಲ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ನಿನ್ನೆ ಮತ್ತು ಇಂದು ಹೇಳಿಕೆ ನೀಡಿ ಸ್ಪಷ್ಟಪಡಿಸಿದರು. ಇದಕ್ಕೆ ಒಪ್ಪದ ಕಾರ್ಯಕರ್ತರು ವಿಜಯೇಂದ್ರ ಅವರಿಗೇ ಟಿಕೆಟ್ ನೀಡಬೇಕು ಎಂದು ಮೈಸೂರಿನಲ್ಲಿ ಪ್ರತಿಭಟನೆಗಿಳಿದಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೆÇಲೀಸರು ಲಘು ಲಾಠಿ ಪ್ರಹಾರ ಮಾಡಿದ ಘಟನೆಯೂ ನಡೆಯಿತು.
ಗ್ರಾಮ ಸ್ವರಾಜ್ ಅಭಿಯಾನಕ್ಕೆ ಚಾಲನೆ
ಮಧ್ಯಪ್ರದೇಶ, ಏ. 24: ರಾಷ್ಟ್ರದ ಪಂಚಾಯತ್ ರಾಜ್ ವ್ಯವಸ್ಥೆ ಸದೃಢಗೊಳಿಸುವ ನಿಟ್ಟಿನಲ್ಲಿ ಮತ್ತೊಂದು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಚಾಲನೆ ನೀಡಿದರು. ಪಂಚಾಯತ್ ರಾಜ್ ದಿನದ ಅಂಗವಾಗಿ ಬುಡುಕಟ್ಟ ಜನರ ಪ್ರಾಬಲ್ಯ ಹೆಚ್ಚಾಗಿರುವ ರಾಮನಗರದಲ್ಲಿ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನಕ್ಕೆ ಚಾಲನೆ ನೀಡಿದರು. ಗ್ರಾಮೀಣ ಸ್ಥಳೀಯ ಸಂಸ್ಥೆಯನ್ನು ಸ್ವಸಾಮಥ್ರ್ಯದ ಆಧಾರದ ಸುಸ್ಥಿರಗೊಳಿಸುವದು, ಆರ್ಥಿಕ ಭದ್ರತೆ ಹಾಗೂ ಹೆಚ್ಚಿನ ದಕ್ಷತೆ ಒದಗಿಸುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ. ಪಂಚಾಯತ್ ರಾಜ್ ಸಂಸ್ಥೆಗಳ ಸಾಮಥ್ರ್ಯ ಮತ್ತು ದಕ್ಷತೆಯನ್ನು ಹೆಚ್ಚಿಸಿ ಅಧಿಕಾರ ಮತ್ತು ಜವಾಬ್ದಾರಿ ಹಂಚಿಕೆಯನ್ನು ಉತ್ತೇಜಿಸುವದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಮುಂದಿನ ಐದು ವರ್ಷಗಳಲ್ಲಿ ಮಧ್ಯಪ್ರದೇಶದಲ್ಲಿನ ಬುಡಕುಟ್ಟ ಸಮುದಾಯದ ಪ್ರದೇಶದ ಅಭಿವೃದ್ಧಿ ನೀಲಿನಕ್ಷೆಯನ್ನು ಇದೇ ಸಂದರ್ಭದಲ್ಲಿ ಪ್ರಧಾನಿ ಅನಾವರಣಗೊಳಿಸಿದರು.
ಸ್ಪರ್ಧೆಯಿಂದ ಹಿಂದೆ ಸರಿದ ಅಂಬರೀಷ್
ಬೆಂಗಳೂರು, ಏ. 24: ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೊಂದಲಕ್ಕೆ ಕೊನೆಗೂ ರೆಬೆಲ್ ಸ್ಟಾರ್ ಅಂಬರೀಶ್ ತೆರೆ ಎಳೆದಿದ್ದು, ತಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರು ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಂಬರೀಶ್ ಅವರು, ಹಾಲಿ ಚುನಾವಣೆಯಲ್ಲಿ ನಾನು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತಿಲ್ಲ. ಅನಾರೋಗ್ಯದ ಕಾರಣದಿಂದಾಗಿ ತಾನು ಸ್ಪರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ, ವಯಸ್ಸಾಯ್ತು, ಶಕ್ತಿ ಕುಂದುತ್ತಿದೆ. ಹೀಗಾಗಿ ಯಾವದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವದಿಲ್ಲ ಎಂದು ನಟ ಅಂಬರೀಶ್ ಹೇಳಿದರು. ಈಗ ನನಗೆ 66 ವರ್ಷ ಮತ್ತೆ ಐದು ವರ್ಷ ಎಂದರೆ 71 ವರ್ಷವಾಗುತ್ತದೆ. ಆ ವಯಸ್ಸಿನಲ್ಲಿ ರಾಜಕೀಯ ಮಾಡಲು ತನ್ನಿಂದ ಸಾದ್ಯವಿಲ್ಲ. ಎಲ್ಲರೂ ದೇವೇಗೌಡರಾಗಲೂ ಸಾಧ್ಯವಿಲ್ಲ ಎಂದು ಹೇಳಿದರು. ಇದೇ ವೇಳೆ ತಮ್ಮ ಬದಲಾಗಿ ಬೇರೆ ಅಭ್ಯರ್ಥಿಯನ್ನು ಸೂಚಿಸಬಹುದಿತ್ತಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅಂಬಿ, ನಾನು ಅಭ್ಯರ್ಥಿಯನ್ನು ಸೂಚಿಸಿದರೆ ಆತನ ಪ್ರಚಾರಕ್ಕಾಗಿ ತಾನು ಹೋಗಬೇಕು. ಪ್ರಚಾರಕ್ಕೆ ಹೋಗಬಹುದಾಗಿದ್ದರೆ ತಾನೇ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೆ. ಅದು ಸಾಧ್ಯವಿಲ್ಲ ಎಂದೇ ತಾನು ಮನೆಯಲ್ಲಿ ಕುಳಿತಿದ್ದೇನೆ. ಹೀಗಾಗಿ ಬೇರೆ ಯಾರನ್ನೂ ಅಭ್ಯರ್ಥಿಯಾಗಿ ಸೂಚಿಸಿಲ್ಲ. ಆದರೆ ಪಕ್ಷ ಯಾರನ್ನೇ ಅಭ್ಯರ್ಥಿಯಾಗಿಸಿದರೂ ಅವರಿಗೆ ತನ್ನ ಬೆಂಬಲ ವಿರುತ್ತದೆ ಎಂದು ಹೇಳಿದರು.