ವೀರಾಜಪೇಟೆ, ಏ. 24: ಕಾಶ್ಮೀರದ ಕಥುವಾ ಎಂಬಲ್ಲಿ ಎಂಟು ವರ್ಷದ ಬಾಲಕಿ ಆಸಿಫಾ ಮೇಲೆ ದುಷ್ಕರ್ಮಿಗಳು ನಡೆಸಿದ ಅಮಾನವೀಯ ಬಲಾತ್ಕಾರ ಹಾಗೂ ಹತ್ಯೆಯನ್ನು ಖಂಡಿಸಿ ವೀರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಮೇಣದ ಬತ್ತಿ ಉರಿಸುವದರ ಮೂಲಕ ಪ್ರತಿಭಟಿಸಿದರು.

ಈ ಸಂದರ್ಭ ಪ್ರಾಂಶುಪಾಲ ಐಸಾಕ್ ರತ್ನಾಕರ್, ಕನ್ನಡ ವಿಭಾಗದ ಮುಖ್ಯಸ್ಥ ಹೆಚ್.ಆರ್. ಅರ್ಜುನ್ ಉಪಸ್ಥಿತರಿದ್ದರು. ಈ ಸಂದರ್ಭ ಮೊಂಬತ್ತಿ ಬೆಳಗಿ, ಮೌನ ಪ್ರಾರ್ಥನೆ ಮಾಡಿ ಪ್ರತಿಜ್ಞೆ ಸ್ವೀಕರಿಸಲಾಯಿತು.