ಕೂಡಿಗೆ, ಏ. 24: ಕೊಡಗು ಜಿಲ್ಲಾ ಪೊಲೀಸ್, ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಸಾಧಕ್ ಸುರಕ್ಷಾ- ಜೀವನ್ ರಕ್ಷಾ ಎಂಬ ಶೀರ್ಷಿಕೆಯಡಿಯಲ್ಲಿ 29ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಕೂಡಿಗೆ ಮತ್ತು ಕುಶಾಲನಗರದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಅಪ್ಪಾಜಿ ಮಾತನಾಡಿ, ವಾಹನ ಚಾಲನೆ ಮಾಡುವ ಸಂದರ್ಭ ಚಾಲಕರು ಮೊಬೈಲ್ನಲ್ಲಿ ಮಾತನಾಡಬಾರದು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಕಾರು ಚಾಲಕರು ಸೀಟ್ ಬೆಲ್ಟ್ಗಳನ್ನು ಹಾಕಿಕೊಳ್ಳಬೇಕು. ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು ಹಾಗೂ ಸಂಚಾರಿ ನಿಯಮವನ್ನು ಪಾಲಿಸುವದರ ಜೊತೆಗೆ ಪೊಲೀಸರೊಂದಿಗೆ ಸಹಕಾರ ನೀಡಬೇಕು ಎಂದರು. ಕುಶಾಲನಗರದ ಸಮೀಪದ ಪಾಲಿಟೆಕ್ನಿಕ್ ಕಾಲೇಜಿನ ಬಳಿ ಹಾಗೂ ಕೂಡ್ಲೂರು ಕೈಗಾರಿಕಾ ಬಡಾವಣೆ, ಕೂಡಿಗೆ ಸರ್ಕಲ್, ಮಾದಾಪಟ್ಟಣಗಳಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮಗಳನ್ನು ನಡೆಸಲಾಯಿತು. ಈ ಸಂದರ್ಭ ಸಹಾಯಕ ಠಾಣಾಧಿಕಾರಿ ಮೋಹನ್, ರವಿ, ಕುಶಾಲಪ್ಪ, ಸಿಬ್ಬಂದಿಗಳು ಹಾಗೂ ವಾಹನ ಚಾಲಕರು ಇದ್ದರು.