ಕೂಡಿಗೆ, ಏ. 25: ಮಡಿಕೇರಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಕುಶಾಲನಗರ ಹೋಬಳಿ ವ್ಯಾಪ್ತಿಯ ಕೂಡಿಗೆ, ಮದಾಲಪುರ, ಬ್ಯಾಡಗೊಟ್ಟ, ಸೀಗೆಹೊಸೂರು, ಕೂಡುಮಂಗಳೂರಿನಲ್ಲಿ ಮತಯಾಚನೆ ಮಾಡಿದರು.
ಕಾರ್ಯಕರ್ತರನ್ನುದ್ದೇಶಿದ ಮಾತನಾಡಿದ ಎಂ.ಪಿ. ಅಪ್ಪಚ್ಚು ರಂಜನ್, ಆಯಾ ವಾರ್ಡಿನ ಪಕ್ಷದ ಕಾರ್ಯಕರ್ತರು ಕೇಂದ್ರದ ನಾಯಕರ ಆದೇಶದಂತೆ ಪೇಜ್ ವ್ಯವಸ್ಥೆಯ ಅಡಿಯಲ್ಲಿ ತಮ್ಮ ತಮ್ಮ ಕಾರ್ಯವ್ಯಾಪ್ತಿಯಲ್ಲಿನ ಮತದಾರರನ್ನು ಭೇಟಿ ಮಾಡಿ, ಪಕ್ಷದ ಅಭ್ಯರ್ಥಿಯ ಗೆಲುವಿಗೆ ಪ್ರಯತ್ನಿಸಬೇಕು. ಅಲ್ಲದೆ, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭ ಬಿಜೆಪಿ ತಾಲೂಕು ಉಪಾಧ್ಯಕ್ಷ ಕೆ.ಕೆ. ಭೋಗಪ್ಪ, ಆರ್‍ಎಂಸಿ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಕೂಡುಮಂಗಳೂರು ಸ್ಥಾನೀಯ ಸಮಿತಿಯ ಅಧ್ಯಕ್ಷ ಮಂಜುನಾಥ್, ಕೂಡುಮಂಗಳೂರು ಯುವ ಮೋರ್ಚಾದ ಅಧ್ಯಕ್ಷ ಶಶಿಕಿರಣ್, ಎಸ್.ಸಿ. ಮೋರ್ಚಾದ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ, ಜಿಲ್ಲಾ ನಿರ್ದೇಶಕ ವರದರಾಜ್ ದಾಸ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಸಾವಿತ್ರಿ ರಾಜನ್, ಪಾರ್ವತಮ್ಮ, ವಿವಿಧ ಘಟಕಗಳ ಪುರುಷ ಮತ್ತು ಮಹಿಳಾ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.