ಸೋಮವಾರಪೇಟೆ, ಏ. 26: ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ಜಸ್ವಂತ್, ಡಾ. ವೀಣಾ, ಹೆಚ್.ಕೆ. ಶಾಂತಿ, ಹೆಚ್.ಎನ್. ದಮಯಂತಿ ಅವರುಗಳು ಶಿಬಿರದಲ್ಲಿ ಭಾಗವಹಿಸಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮಹೇಶ್ ಉಪಸ್ಥಿತರಿದ್ದರು.