ಸೋಮವಾರಪೇಟೆ, ಏ. 28: ಪಟ್ಟಣದ ಶಿವಾಜಿ ರಸ್ತೆಯಲ್ಲಿ ಅಳವಡಿಸಿದ್ದ ವಿದ್ಯುತ್ ತಂತಿಯ ಮೇಲೆ ಮರದ ಕೊಂಬೆ ಬಿದ್ದ ಪರಿಣಾಮ, ತಂತಿ ಸಹಿತ ವಿದ್ಯುತ್ ಕಂಬ ರಸ್ತೆಗೆ ಉರುಳಿ ಬಿದ್ದ ಘಟನೆ ನಿನ್ನೆ ರಾತ್ರಿ ನಡೆದಿದೆ.
ನಿನ್ನೆ ರಾತ್ರಿ ಬೀಸಿದ ಭಾರೀ ಗಾಳಿಗೆ ಮರದ ಕೊಂಬೆ ವಿದ್ಯುತ್ ತಂತಿಯ ಮೇಲೆ ಬಿದ್ದ ಹಿನ್ನೆಲೆ ಕಂಬ ಧರೆಗುರುಳಿದೆ. ಈ ಸಂದರ್ಭ ರಸ್ತೆಯಲ್ಲಿ ಯಾರೂ ಸಂಚರಿಸದೇ ಇದ್ದುದರಿಂದ ಯಾವದೇ ಅನಾಹುತ ಸಂಭವಿಸಿಲ್ಲ. ಕೂಡಲೇ ಸೆಸ್ಕ್ ಇಲಾಖೆಯವರು ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಮುಂದಾಗಬಹುದಾಗಿದ್ದ ಅನಾಹುತವನ್ನು ತಪ್ಪಿಸಿದರು.