ಶನಿವಾರಸಂತೆ, ಏ. 29: ವಿಧಾನಸಭಾ ಚುನಾವಣೆ ಹಿನ್ನೆಲೆ ಪಟ್ಟಣದ ವಿವಿಧ ವಿಭಾಗದ ಮತದಾರರಿಗೆ ಮತ ಯಂತ್ರದ ಮೂಲಕ ಹಕ್ಕು ಚಲಾಯಿಸುವ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು.ಚುನಾವಣಾ ಅಧಿಕಾರಿಗಳು, ಪಿಡಿಓ ಧನಂಜಯ್ ಹಾಗೂ ಸಿಬ್ಬಂದಿ ಪಟ್ಟಣದ ಗ್ರಾಮ ಪಂಚಾಯಿತಿ ಕಾರ್ಯಾಲಯ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಗುಂಡೂರಾವ್ ಬಡಾವಣೆ, ತ್ಯಾಗರಾಜ ಕಾಲೋನಿಯಲ್ಲಿ ಮತದಾರರಿಗೆ ಮತಯಂತ್ರದಲ್ಲಿ ಮತ ಚಲಾಯಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿ ಅರಿವು ಮೂಡಿಸಿದರು.
ಈ ಸಂದರ್ಭ ಅಧಿಕಾರಿಗಳು ಮೇ 12 ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾರ ಪಟ್ಟಿಯಲ್ಲಿ ಇರುವ ಪ್ರತಿ ಮತದಾರರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿದರು.