ಸೋಮವಾರಪೇಟೆ,ಏ.29: ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ತಾ. 30ರಂದು (ಇಂದು) ಸೋಮವಾರಪೇಟೆಯ ಜೇಸಿ ವೇದಿಕೆಯಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ಪಕ್ಷದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಡಿಸಿಲ್ವಾ ತಿಳಿಸಿದ್ದಾರೆ.
ತಾ. 30ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಬಹಿರಂಗ ಸಭೆಯಲ್ಲಿ ಜೆಡಿಎಸ್ ಯುವ ಘಟಕದ ಮುಖಂಡರಾದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಬಿ.ಎ. ಜೀವಿಜಯ, ಬಿಎಸ್‍ಪಿ ಮುಖಂಡರಾದ ಮೋಹನ್ ಮೌರ್ಯ, ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ಆರ್. ಸುರೇಶ್ ಸೇರಿದಂತೆ ಇತರ ಮುಖಂಡರು ಭಾಗವಹಿಸಲಿದ್ದಾರೆ ಎಂದು ಡಿಸಿಲ್ವಾ ಮಾಹಿತಿ ನೀಡಿದ್ದಾರೆ.