ಕುಶಾಲನಗರ, ಏ 29: ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶ್ರೀವಿದ್ಯಾ ಕುಶಾಲನಗರ ಗಡಿಭಾಗದ ಚುನಾವಣಾ ಚೆಕ್ ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ನಿರ್ದೇಶನದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ಗಳಿಗೆ ಭೇಟಿ ನೀಡಿದ್ದು ತಪಾಸಣಾ ಕಾರ್ಯದ ಬಗ್ಗೆ ಸ್ಥಿರ ಕಣ್ಗಾವಲು ಪಡೆಯ ಸದಸ್ಯರಿಗೆ ಸೂಚನೆ ಸಲಹೆ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ತಪಾಸಣೆ ಸಂದರ್ಭ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವದನ್ನು ತಪ್ಪಿಸಲು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸುವದರೊಂದಿಗೆ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಕ್ರಮಕೈಗೊಳ್ಳಲು ಮಾರ್ಗದರ್ಶನ ನೀಡಿದರು.