ಕುಶಾಲನಗರ, ಏ. 30: ಸಿಡಿಲು ಬಡಿದು ಇಬ್ಬರು ಮಹಿಳೆಯರು ಗಾಯಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಇಲ್ಲಿಗೆ ಸಮೀಪದ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಸೋಮವಾರ ಗ್ರಾಮದ ಚಿಕ್ಕಹೊಸೂರು ಬಳಿ ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಸಿಡಿಲು ಬಡಿದಿದೆ. ಶಶಿಕಲಾ (35), ಸುಶೀಲಾ (28) ಸಿಡಿಲಿನ ಆಘಾತಕ್ಕೆ ಒಳಗಾಗಿ ಅಲ್ಪಸ್ವಲ್ಪ ಗಾಯಗಳಿಂದ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.