ಸೋಮವಾರಪೇಟೆ,ಏ.29: ಎಳೆಯ ಮಕ್ಕಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಬೇಸಿಗೆ ಶಿಬಿರಗಳು ಸಹಕಾರಿಯಾಗಿವೆ ಎಂದು ಪುಷ್ಪಗಿರಿ ಜೇಸೀ ಸಂಸ್ಥೆಯ ಮಹಿಳಾ ಘಟಕದ ಅಧ್ಯಕ್ಷೆ ಮಾಯಾ ಗಿರೀಶ್ ಅಭಿಪ್ರಾಯಿಸಿದರು.
ಜೇಸೀರೇಟ್ ವತಿಯಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸ ಲಾಗಿದ್ದ ಬೇಸಿಗೆ ಶಿಬಿರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಜಾ ದಿನಗಳಲ್ಲಿ ಕ್ರಿಯಾತ್ಮಕ ಚಟುವಟಿಕೆ ಗಳತ್ತ ಮಕ್ಕಳು ತೊಡಗುವಂತೆ ಮಾಡಬೇಕು. ಆ ಮೂಲಕ ಅವರಲ್ಲಿರುವ ಪ್ರತಿಭೆ ಗಳನ್ನು ಗುರುತಿಸಿ ಆಸಕ್ತಿಯ ಕ್ಷೇತ್ರ ದಲ್ಲಿ ಪರಿಣತಿ ನೀಡಲು ಸಹಕಾರಿ ಯಾಗುತ್ತದೆ. ಮಕ್ಕಳ ಸರ್ವಾಂಗೀಣ ಪ್ರಗತಿಗೆ ಶಿಬಿರಗಳು ಪೂರಕ ವಾತಾವರಣ ನಿರ್ಮಿಸುತ್ತವೆ ಎಂದರು. ಕಾರ್ಯಕ್ರಮದಲ್ಲಿ ಜೇಸಿ ಅಧ್ಯಕ್ಷ ಪ್ರಕಾಶ್, ಸದಸ್ಯ ಜಯೇಶ್, ಯೋಜನಾ ನಿರ್ದೇಶಕಿ ಮಾನಸ, ಜೇಸಿರೇಟ್ ಕಾರ್ಯದರ್ಶಿ ಶೈಲಾ ವಸಂತ್ ಉಪಸ್ಥಿತರಿದ್ದರು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಂಸನಾ ಪತ್ರ ನೀಡಲಾಯಿತು. ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ದಲ್ಲಿ ಜಯಗಳಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.