ಸುಂಟಿಕೊಪ್ಪ, ಏ. 30 : ಸುಂಟಿಕೊಪ್ಪ ವಿವಿಧ ಮತಗಟ್ಟೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಭೇಟಿ ನೀಡಿ ಕೇಂದ್ರಗಳ ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸಿದರು. ಸರಕಾರಿ ಮಾದರಿ ಪ್ರಾಥಮಿಕ, ಸರಕಾರಿ ಪ್ರೌಢಶಾಲೆ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿರುವ ಮತ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು ಮೂಲಭೂತ ಸೌಕರ್ಯಗಳ ಸವಲತ್ತುಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಂದಾಯ ಪರಿವೀಕ್ಷಕರಾದ ಶಿವಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇದಪ್ಪ, ಗ್ರಾಮಲೆಕ್ಕಿಗರು ಹಾಗೂ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.