ಸೋಮವಾರಪೇಟೆ,ಮೇ.2: ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಎಂ.ಪಿ. ಅಪ್ಪಚ್ಚು ರಂಜನ್ ಅವರು ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು.
ಆದಿಚುಂಚನಗಿರಿಯ ಹಾಸನದ ಶಾಖಾ ಮಠಕ್ಕೆ ಭೇಟಿ ನೀಡಿದ ರಂಜನ್, ಶ್ರೀ ಶ್ರೀ ಶಂಭುನಾಥ ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಈ ಸಂದರ್ಭ ಜಿಲ್ಲೆಯ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ, ಕಲ್ಲು ಮಠದ ಮಠಾಧೀಶರಾದ ಶ್ರೀ ಮಹಾಂತ ಸ್ವಾಮೀಜಿ, ಬಸವ ಪಟ್ಟಣ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಮನೆಹಳ್ಳಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಸಿಡಿಗಳಲೆ ಮಠಾಧೀಶರಾದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ ಅವರುಗಳು ಉಪಸ್ಥಿತರಿದ್ದರು.