ಸೋಮವಾರಪೇಟೆ,ಮೇ.2: ಬಾಲಭವನ ಬೆಂಗಳೂರು ಮತ್ತು ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ಮಕ್ಕಳ ಬೇಸಿಗೆ ಶಿಬಿರ ಸ್ಥಳೀಯ ಸ್ತ್ರೀಶಕ್ತಿ ಭವನದಲ್ಲಿ ತಾ. 5 ರಿಂದ 15ರವರೆಗೆ ನಡೆಯಲಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ತಿಳಿಸಿದ್ದಾರೆ. ಶಿಬಿರದಲ್ಲಿ 5ರಿಂದ 15 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು. ಶಿಬಿರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ನಡೆಯುತ್ತದೆ. ಚಿತ್ರಕಲೆ, ಕರಕುಶಲ, ಜೇಡಿ ಮಣ್ಣಿನ ಕಲೆ, ಕಸದಿಂದ ರಸ, ಸಮೂಹ ಸಂಗೀತ, ಸಮೂಹ ನೃತ್ಯ, ಯೋಗ, ಕರಾಟೆ, ಇವುಗಳಲ್ಲಿ ಐದನ್ನು ಶಿಬಿರಾರ್ಥಿಗಳು ಆಯ್ಕೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಅಥವಾ ದೂ.ಸಂಖ್ಯೆ 08276-282281 ನಲ್ಲಿ ಸಂಪರ್ಕಿಸಬಹುದು.