ಕೂಡಿಗೆ, ಮೇ 3: ವಿಧಾನಸಭಾ ಚುನಾವಣೆಯ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಅವರ ಸಮ್ಮುಖದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ವಾಡ್À್ನ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯೆ ಶಿಲ್ಪ ರಾಜು ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭ ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಕೆ. ಬೋಗಪ್ಪ, ಹಿರಿಯ ಮುಖಂಡರು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯನ್, ತಾಲೂಕು ಅಧ್ಯಕ್ಷ ಕುಮಾರಸ್ವಾಮಿ, ಪ್ರಭಾಕರ್, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಜಿ ಮಂಜುನಾಥ, ಉಪಾಧ್ಯಕ್ಷ ಕೃಷ್ಣ, ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ರಮೇಶ್ ಇದ್ದರು.