ಮಡಿಕೇರಿ: ವೀರಾಜ ಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್. ಅರುಣ್ ಮಾಚಯ್ಯ ನಾಗರಹೊಳೆ ಹಾಡಿ ಹಾಗೂ ಕುಟ್ಟ ಗ್ರಾಮ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹಾಡಿ ನಿವಾಸಿ ಗಳೊಂದಿಗೆ ಚರ್ಚಿಸಿದ ಅವರು ಸಮಸ್ಯೆಗಳನ್ನು ಆಲಿಸಿದರು. ನಂತರ ಮಾತನಾಡಿದ ಅರುಣ್ ಮಾಚಯ್ಯ, ಕ್ಷೇತ್ರದ ಜನ ತನ್ನ ಪರ ಒಲವು ತೋರುತ್ತಿದ್ದು, ಹೋದ ಕಡೆಯಲೆಲ್ಲ ಉತ್ತಮ ಸ್ಪಂದನ ದೊರೆಯುತ್ತಿದೆ ಎಂದರು. ಈ ಬಾರಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವದು ಖಚಿತವೆಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಜಿಲ್ಲಾ ವಕ್ತಾರ ಟಾಟೂ ಮೊಣ್ಣಪ್ಪ ಮಾತನಾಡಿ, ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದರು. ಪಕ್ಷದ ಪರಿಶಿಷ್ಟ ಜಾತಿ, ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ಸತೀಶ್ ಕುಮಾರ್, ಹಿಂದುಳಿದ ವರ್ಗ ಘಟಕದ ಪ್ರಮುಖ ಸರ ಚಂಗಪ್ಪ ಮತ್ತಿತರ ಪದಾಧಿ ಕಾರಿಗಳು ಹಾಗೂ ಕಾರ್ಯಕರ್ತರು ಈ ಸಂದರ್ಭ ಹಾಜರಿದ್ದರು.