ಕುಶಾಲನಗರ, ಮೇ 5: ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಮುಖರು ನೀಡುತ್ತಿರುವ ಹೇಳಿಕೆಯಲ್ಲಿ ಯಾವದೇ ತಿರುಳಿಲ್ಲ ಎಂದು ರಾಜ್ಯ ಯುವ ಜನತಾದಳ ಕಾರ್ಯದರ್ಶಿ ಜಾಷಿರ್ ಸ್ಪಷ್ಟಪಡಿಸಿದ್ದಾರೆ.
ಕುಶಾಲನಗರದಲ್ಲಿ ನಡೆದ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ ಎಂದು ಕಾಂಗ್ರೆಸ್ ಪ್ರಮುಖರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಜೆಡಿಎಸ್ ಯಾವದೇ ಪಕ್ಷದೊಂದಿಗೆ ಒಪ್ಪಂದ ಮಾಡಿ ಕೊಂಡಿಲ್ಲ ಎಂದಿದ್ದಾರೆ. ಗೋಷ್ಠಿಯಲ್ಲಿ ಪಕ್ಷದ ಮಡಿಕೇರಿ ಕ್ಷೇತ್ರದ ಅಧ್ಯಕ್ಷ ಮುಸ್ತಾಫ, ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಅಬ್ದುಲ್ ಅಜೀಜ್ ಇದ್ದರು.